ಕರ್ನಾಟದಲ್ಲಿ ಕಾನೂನು ಸುವ್ಯವಸ್ಥೆ ಸರಿಇದ್ದಷ್ಟು ದೇಶದ ಯಾವ ರಾಜ್ಯದಲ್ಲೂ ಇಲ್ಲ!

dk shivakumar
Published on

ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇದ್ದಷ್ಟು ಈ ದೇಶದ ಯಾವ ರಾಜ್ಯದಲ್ಲೂ ಇಲ್ಲ. ಬಿಜೆಪಿಯವರು ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದೇ ಹುಬ್ಬಳ್ಳಿ ಕೊಲೆ ಪ್ರಕರಣ ಒಂದು ಉದಾಹರಣೆ ಎಂದು ಬಿಜೆಪಿ ಹೇಳಿತ್ತು. ಇದಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರ ಆಡಳಿತ ಹೇರಲು ಈ ರೀತಿಯ ನಾಟಕ ಹಾಗು ಹುನ್ನಾರವನ್ನು ವಿಪಕ್ಷ ನಾಯಕ ಆರ್. ಅಶೋಕ ಮತ್ತು ಬಿಜೆಪಿಯವರು ಮಾಡುತ್ತಿದ್ದಾರೆ. ಈ ರೀತಿ ಆಗಲು ನಾವು ಬಿಡುವುದಿಲ್ಲ. ನಿಷ್ಪಕ್ಷಪಾತವಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಕರ್ನಾಟಕ ಬಿಹಾರ ಆಗುತ್ತದೆ ಎನ್ನುವ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಅವರ ಕಾಲದಲ್ಲಿಯೂ ಅನೇಕ ಕೃತ್ಯಗಳು ನಡೆದಿದ್ದವು. ಎಲ್ಲರ ಕಾಲದಲ್ಲೂ ವೈಯಕ್ತಿಕ ಕಾರಣಗಳಿಗೆ ಇವು ನಡೆಯುತ್ತಿರುತ್ತವೆ. ಆದರೆ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಈ ವಿಚಾರವಾಗಿ ಹಸ್ತಕ್ಷೇಪ ಮಾಡುವುದಿಲ್ಲ. ಪೊಲೀಸರು ತಮ್ಮ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net