DK Shivakumar ಅವರ ಕಲ್ಪನೆಯ ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: Laxmi Hebbalkar

Laxmi Hebbalkar
Published on

ಉಡುಪಿ: 2023ರ ರಾಜ್ಯ ವಿಧಾನಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್​ ಪಕ್ಷ (Congress Party) ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆ (Shakti Scheme) ಕೂಡ ಒಂದಾಗಿದ್ದು, ರಾಜ್ಯಾದ್ಯಂತ ಈ ಯೋಜನೆಗೆ ಭರ್ಜರಿ ರೆಸ್ಪಾನ್ಸ್​ ದೊರೆಯುತ್ತಿದೆ. ಯೋಜನೆ ಜಾರಿಯಾಗಿ ಒಂದು ವರ್ಷಕ್ಕೂ ಅಧಿಕ ಕಾಲಗಳಾಗಿದ್ದು, ಮಹಿಳೆಯರು ಉಚಿತ ಪ್ರಯಾಣದ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ನಿಲ್ಲಿಸುವುದಾಗಿ ಪರೋಕ್ಷ ಹೇಳಿಕೆ ನೀಡಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ (Dk Shivakumar)​ ಅವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಯನ್ನ ಹುಟ್ಟುಹಾಕಿದ್ದು, ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar)​ ಪ್ರತಿಕ್ರಿಯಿಸಿದ್ದಾರೆ.

ಉಡುಪಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು (Guarantee Schemes) ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಶಕ್ತಿ ಯೋಜನೆಯಿಂದ (Shakti Scheme) ಲಕ್ಷಾಂತರ ಮಹಿಳೆಯರಿಗೆ ಅನುಕೂಲ ಆಗಿದೆ. ಯಾರೋ ಒಂದಿಬ್ಬರು ಯೋಜನೆ ನಿಲ್ಲಿಸಿ ಎಂದು ಸರ್ಕಾರಕ್ಕೆ ಹೇಳಿದಾಕ್ಷಣ ಯೋಜನೆಯನ್ನು ನಿಲ್ಲಿಸಲು ಸಾಧ್ಯವಿಲ್ಲ.

ಶಕ್ತಿ ಯೋಜನೆ (Shakti Scheme) ಜಾರಿಗೆ ಬಂದ ಬಳಿಕ ಸಾರಿಗೆ ಸಂಸ್ಥೆಯ ನಿಗಮಗಳು ಒಳ್ಳೆಯ ಹೆಸರು ಪಡೆದಿದ್ದು, ಉತ್ತಮ ಲಾಭದಲ್ಲಿವೆ. ಮಹಿಳೆಯರ ಪಾಲಿಗೆ ಶಕ್ತಿ ಯೋಜನೆ ಸಂಜೀವಿನಿಯಾಗಿದೆ. ಅನುಕೂಲ ಇರುವವರು ಉಚಿತವಾಗಿ ಪ್ರಯಾಣ ಮಾಡೋದು ಬೇಡ. ಶಕ್ತಿ ಯೋಜನೆಯಿಂದ (Shakti Scheme) ಲಕ್ಷಾಂತರ ಮಹಿಳೆಯರಿಗೆ ಉಪಯೋಗವಾಗುತ್ತಿದೆ. ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ.

ಡಿ.ಕೆ.ಶಿವಕುಮಾರ್ (Dk Shivakumar) ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ರಾಜ್ಯದ ಮಹಿಳೆಯರು ಬೆಲೆ ಏರಿಕೆ ಬಗ್ಗೆ ತಮ್ಮ ಅಳಲು ತೋಡಿಕೊಂಡಿದ್ದರು. ಮಹಿಳೆಯರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಡಿ.ಕೆ.ಶಿವಕುಮಾರ್ (DK Shivakumar) ಅವರು ನಾ ನಾಯಕಿ ಎಂಬ ಕಾರ್ಯಕ್ರಮ ರೂಪಿಸಿದರು. ಬೆಲೆ ಏರಿಕೆ ಬರೆಯನ್ನ ಅಳಿಸುವ ಸಲುವಾಗಿ ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನವೇ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತು. ಚುನಾವಣೆಗೂ ಮುನ್ನ ಪ್ರಿಯಾಂಕಾ ಗಾಂಧಿಯವರು ಶಕ್ತಿ ಯೋಜನೆಯನ್ನು (Shakti Scheme) ಘೋಷಿಸಿದ್ದರು. ಅದರಂತೆಯೇ ಶಕ್ತಿ ಯೋಜನೆ ಜಾರಿಗೆ ತರಲಾಗಿದೆ. ಡಿ.ಕೆ.ಶಿವಕುಮಾರ್ (DK Shivakumar) ಅವರ ಕಲ್ಪನೆಯ ಶಕ್ತಿ ಯೋಜನೆಯಾಗಿದ್ದು, ಇದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ. ಯೋಜನೆಯನ್ನು ನಿಲ್ಲಿಸಲಾಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ವಿಷಯ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar)​ ಸ್ಪಷ್ಟಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net