ಕೊಳೆತ ಮೊಟ್ಟೆ ಪೂರೈಕೆಯ ರಾಜ್ಯವ್ಯಾಪಿ ತನಿಖೆಗೆ ಆದೇಶ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

Lakshmi Hebbalkar
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ಕೊಳೆತ ಮೊಟ್ಟೆ ಪೂರೈಕೆ ಪತ್ತೆಯಾದ ಸ್ಥಳ ಮಾತ್ರವಲ್ಲದೇ ರಾಜ್ಯವ್ಯಾಪಿ ತನಿಖೆಗೆ ಆದೇಶಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮಗುಣಮಟ್ಟದ ಪೂರೈಕೆಯು ಸರ್ಕಾರದ ಕಾಳಜಿಯಾಗಿದೆ. ಪತ್ತೆಯಾದ ಸ್ಥಳದಲ್ಲಿ ಕ್ತಮವಹಿಸಿದರೆ ಸಾಲದು ಎಂದು ರಾಜ್ಯಮಟ್ಟದ ಅಧಿಕಾರಿಗೆ ತನಿಖೆ ಜವಾಬ್ದಾರಿ ಒಪ್ಪಿಸಿದ್ದು, ವರದಿ ಸಲ್ಲಿಕೆಯಾದ ನಂತರ ಕ್ರಮವಹಿಸುವೆ ಎಂದರು.

ಈಗಾಗಲೇ ಕಳಪೆ ಮೊಟ್ಟೆಗಳು ಸ್ಥಳಕ್ಕೆ ಸಂಬಂಧಿಸಿದ ಪೂರೈಕೆದಾರರಿಗೆ ನೋಟಿಸ್ ನೀಡಲು ಸೂಚಿಸಲಾಗಿದೆ. ತಾಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಟೆಂಡರ್ ಕರೆದು ಮೊಟ್ಟೆ ಪೂರೈಕೆ ಗುತ್ತಿಗೆ ನೀಡಿರುವ ಕಾರಣ ಆಯಾ ಅಧಿಕಾರಿಗಳಿಗೆ ನೋಟಿಸ್ ನೀಡಿ ಕ್ರಮವಹಿಸಲು ತಿಳಿಸಲಾಗಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net