ಕ್ರೀಡೆಯಿಂದ ನಾಯಕತ್ವ ಗುಣ ವೃದ್ಧಿ

ಕ್ರೀಡೆಯಿಂದ ನಾಯಕತ್ವ ಗುಣ ವೃದ್ಧಿ
Published on

ನಂಜನಗೂಡು: ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ನೀಡುವ ಆದ್ಯತೆಯನ್ನು ಕ್ರೀಡೆಗಳಿಗೂ ನೀಡಬೇಕು ಎಂದು ಶಾಸಕ ದರ್ಶನ್‌ಧ್ರುವನಾರಾಯಣ ಹೇಳಿದರು.

ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಕೆಂಪಿಸಿದ್ದನಹುಂಡಿಯ ಕನಕದಾಸ ಸಾರ್ವಜನಿಕ ಪ್ರೌಢಶಾಲೆಯ ಸಹಯೋಗದಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಪೂರ್ವ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಮನಸ್ಸು ಮತ್ತು ದೇಹ ಎರಡರ ಮೇಲೂ ಸಹ ಧನಾತ್ಮಕ ಪರಿಣಾಮ ಬೀರುತ್ತವೆ. ವ್ಯಕ್ತಿಯಲ್ಲಿ ಆತ್ಮವಿಶ್ವಾಸ ತುಂಬಿ, ಗುರಿ ಮುಟ್ಟುವ ಸಾಮರ್ಥ್ಯ ವೃದ್ಧಿಸುವುದಲ್ಲೇ ನಾಯಕತ್ವ ಗುಣಗಳನ್ನು ಬೆಳೆಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ನೀಡುವ ಆದ್ಯತೆಯನ್ನು ಕ್ರೀಡೆಗಳಿಗೂ ನೀಡಬೇಕು. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ತಾಳ್ಮೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು. ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಣೆ ಮಾಡಿದರು.

ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಕೆಂಪಿಸಿದ್ದನಹುಂಡಿ ಗ್ರಾಪಂ ಅಧ್ಯಕ್ಷ ರವಿ, ಹುಚ್ಚಯ್ಯ, ಕೆ.ಎನ್.ನಂಜಯ್ಯ, ಸಂತೋಷ್, ರವಿ, ಶೃತಿ ಬೀರಯ್ಯ, ಗ್ರಾಪಂ ಮಾಜಿ ಅಧ್ಯಕ್ಷ ನಂಜಯ್ಯ, ಕಳಲೆ ರಾಜೇಶ್, ಬಿಇಒ ಮಹೇಶ್ ಸೇರಿದಂತೆ ವಿವಿಧ ಶಾಲೆಯ ವಿವಿಧ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net