ಬೆಂಕಿ ನಂದಿಸುವ ವಿಧಾನ ತಿಳಿಯಿರಿ

31 HANUR 4
ಅಜ್ಜೀಪುರ ಸರ್ಕಾರಿ ಶಾಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಮಹೇಶ್, ಅಶೋಕ್, ಚಂದ್ರೇಗೌಡ, ಹರ್ಷ ಇತರರು ಇದ್ದರು.
Published on

ಹನೂರು: ಮನೆಗಳಲ್ಲಿ ಅಗ್ನಿ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸಬೇಕು. ಹಾಗೆಯೇ ಬೆಂಕಿ ನಂದಿಸುವ ವಿಧಾನವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಅಗ್ನಿಶಾಮಕ ಪ್ರಭಾರ ಠಾಣಾಧಿಕಾರಿ ಮಹೇಶ್ ತಿಳಿಸಿದರು.

ತಾಲೂಕಿನ ಅಜ್ಜೀಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಅಗ್ನಿ ಸುರಕ್ಷತೆಯ ಬಗ್ಗೆ ಆಯೋಜಿಸಿದ್ಧ ಜಾಗೃತಿ ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆ ನೀಡಿ ಮಾತನಾಡಿದರು.

ಮನೆ ಹಾಗೂ ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ನಿರ್ಲಕ್ಷ್ಯದ ಕಾರಣದಿಂದ ಅಗ್ನಿ ಅವಘಡಗಳು ಸಂಭವಿಸುತ್ತವೆ. ಇದರಿಂದ ವಸ್ತುಗಳು ನಾಶವಾಗುವುದಲ್ಲದೆ ಪ್ರಾಣಹಾನಿ ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಕೆಲವೊಂದು ಸಂದರ್ಭದಲ್ಲಿ ಇತರರಿಗೂ ಹಾನಿಯಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಬೆಂಕಿ ಅನಾಹುತ ಸಂಭವಿಸದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಮನೆಗಳಲ್ಲಿ ಗ್ಯಾಸ್ ಸಿಲಿಂಡರ್ ಬಗ್ಗೆ ನಿಗಾ ವಹಿಸಬೇಕು. ಒಂದು ವೇಳೆ ಗ್ಯಾಸ್ ಹೊತ್ತಿಕೊಂಡಲ್ಲಿ ಗಾಬರಿಯಾಗುವ ಬದಲು ಆರಿಸುವ ವಿಧಾನವನ್ನು ತಿಳಿದುಕೊಳ್ಳಬೇಕು. ಅಗ್ನಿಶಾಮಕ ಠಾಣೆಗೆ ಮಾಹಿತಿ ತಿಳಿಸಬೇಕು. ಮೊದಲು ಜೀವ ರಕ್ಷಣೆಗೆ ಆದ್ಯತೆ ನೀಡಿ ನಂತರ ವಸ್ತುಗಳ ರಕ್ಷಣೆಗೆ ಮುಂದಾಗಬೇಕು. ಈ ಬಗ್ಗೆ ಪ್ರತಿಯೊಬ್ಬರೂ ಜಾಗೃತಿ ಹೊಂದಬೇಕು. ಜತೆಗೆ ಕುಟುಂಬಸ್ಥರಲ್ಲೂ ಈ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಅಗ್ನಿಶಾಮಕ ಸಿಬ್ಬಂದಿಗಳಾದ ಅಶೋಕ್, ಹರ್ಷ, ಚಂದ್ರೇಗೌಡ, ಬಸವರಾಜು ಹಾಗೂ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net