ಸ್ವಯಂ ರಕ್ಷಣೆಗೆ ಕರಾಟೆ ಕಲಿಕೆ ಸಹಕಾರಿ

23sor2
ಸೊರಬದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕರಾಟೆ ತರಬೇತಿ ಕಾರ್ಯಕ್ರಮವನ್ನು ಪುರಸಭೆ ಸದಸ್ಯೆ ಪ್ರೇಮಾ ಉದ್ಘಾಟಿಸಿದರು. ಶಿಹಾನ್ ಪಂಚಪ್ಪ, ಬಿ.ಗೀತಾ, ತ್ಯಾಗರಾಜ ನಾಯ್ಕ, ಭವಾನಿ ಇತರರಿದ್ದರು.
Published on

ಸೊರಬ: ಹೆಣ್ಣುಮಕ್ಕಳು ಸ್ವಯಂ ರಕ್ಷಣೆ ಮಾಡಿಕೊಳ್ಳಲು ಕರಾಟೆ ಅತ್ಯಂತ ಪ್ರಯೋಜನಕಾರಿ. ಅಲ್ಲದೇ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ವೃದ್ಧಿಸುತ್ತದೆ ಎಂದು ಪುರಸಭೆ ಸದಸ್ಯೆ ಪ್ರೇಮಾ ಹೇಳಿದರು.

ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕರಾಟೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ವಯಂ ರಕ್ಷಣೆಗೆ ಕರಾಟೆ ಕಲಿಕೆ ಅವಶ್ಯಕ ಎಂದು ತಿಳಿಸಿದರು.
ಸಾಗರ ಕರಾಟೆ ಇನ್‌ಸ್ಟಿಟ್ಯೂಟ್ ಕರಾಟೆ ತರಬೇತುದಾರ ಶಿಹಾನ್ ಪಂಚಪ್ಪ ಮಾತನಾಡಿ, ಕರಾಟೆ ಕಲಿಕೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ. ನಾಯಕತ್ವದ ಗುಣ ಬೆಳೆಯುತ್ತದೆ. ಕರಾಟೆಯಲ್ಲಿ ಸಾಧಿಸಿದರೆ ಉನ್ನತ ಶಿಕ್ಷಣ ಪಡೆಯಲು ಮೀಸಲಾತಿ ದೊರೆಯುತ್ತದೆ. ಈ ನಿಟ್ಟಿನಲ್ಲಿ ಮಕ್ಕಳು ಆಸಕ್ತಿಯಿಂದ ಕರಾಟೆ ಕಲಿಯಬೇಕು ಎಂದರು.
ಆರೋಗ್ಯ ಇಲಾಖೆಯಿಂದ ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ಮತ್ತು ಶಿಕ್ಷಣ ಇಲಾಖೆಯಿಂದ ಶೂ ವಿತರಿಸಲಾಯಿತು. ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ನೀಡಲಾಯಿತು.
ಮುಖ್ಯಶಿಕ್ಷಕಿ ಬಿ.ಗೀತಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ತ್ಯಾಗರಾಜ ನಾಯ್ಕ, ಉಪಾಧ್ಯಕ್ಷೆ ಭವಾನಿ, ಸಿಆರ್‌ಪಿ ಸುಧಾ, ಸಮುದಾಯ ಆರೋಗ್ಯಾಧಿಕಾರಿ ಎಚ್.ವೈ.ರಕ್ಷಿತಾ, ಸುರಕ್ಷಾ ಅಧಿಕಾರಿ ಎಂ.ಶೀಲಾ, ಶಿಕ್ಷಕಿಯರಾದ ವಿದ್ಯಾ, ಜ್ಯೋತಿ, ಸುನಿತಾ, ರೂಪಾ, ಅಮೃತಾ, ತುಳಸಾ ನಾಯ್ಕ, ಮುದಿಗೌಡರ್, ಅರುಣ್ ಕುಮಾರ್, ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net