ಲೀಲಮ್ಮರನ್ನು ನೋಡಿಕೊಳ್ಳುತ್ತಿದ್ದ ಬಂಗಾರಮ್ಮ ನಿಧನ

bangaramma leelavathi
Published on

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ನಿಧನದ ಸುದ್ದಿ ಮಾಸುವ ಮುನ್ನವೇ ಮತ್ತೊಂದು ಕಹಿ ವಿಚಾರ ಕೇಳಿ ಬಂದಿದೆ. ಲೀಲಾವತಿ ಅವರನ್ನು ನೋಡಿಕೊಳ್ಳುತ್ತಿದ್ದ ಮಹಿಳೆ ಬಂಗಾರಮ್ಮ ಇಹಲೋಕ ತ್ಯಜಿಸಿದ್ದಾರೆ.

ಕ್ಯಾನ್ಸರ್​ನಿಂದ ಬಳಲುತ್ತಿದ್ದ ಬಂಗಾರಮ್ಮ ಅವರಿಗೆ 65 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ. ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

bangaramma leelavathi

ಬಂಗಾರಮ್ಮನವರು ಚಿಕ್ಕವಯಸ್ಸಿನಿಂದಲೂ ಲೀಲಾವತಿ ಅವರ ಜೊತೆಗೆ ಇರುತ್ತಿದ್ದರು, ಲೀಲಾವತಿ ಚೆನ್ನೈನಲ್ಲಿ ವಾಸವಾಗಿದ್ದಾಗಲೂ, ಅವರೊಂದಿಗೆ ಬಂಗಾರಮ್ಮ ಇದ್ದರು. ಲೀಲಾವತಿ ಎಲ್ಲಿಗೇ ಹೋದರೂ, ಬಂಗಾರಮ್ಮ ಜೊತೆಗೆ ಬರುತ್ತಿದ್ದರು. ಇದೀಗ ಲೀಲಾವತಿ ಇನ್ನಿಲ್ಲವಾದ ಬೆನ್ನಲ್ಲೇ ಬಂಗಾರಮ್ಮ ಕೂಡ ಚಿರನಿದ್ರೆಗೆ ಜಾರಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಬಂಗಾರಮ್ಮ ಅವರಿಗಾಗಿಯೇ ಓರ್ವ ನರ್ಸ್ ನೇಮಿಸಿ ವಿನೋದ್ ರಾಜ್ ಆರೈಕೆ ಮಾಡುತ್ತಿದ್ದರು. ಬಂಗಾರಮ್ಮ ಅವರನ್ನ ವಿನೋದ್‌ ರಾಜ್ ಅವರೇ ನೋಡಿಕೊಳ್ಳುತ್ತಿದ್ದರು. ಡಿಸೆಂಬರ್ 12ರ ರಾತ್ರಿ ನಾಗರಬಾವಿ ಬಳಿಯ ಆಸ್ಪತ್ರೆಯಲ್ಲಿ ಬಂಗಾರಮ್ಮ ಅಸುನೀಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net