ಸಾಮಾಜಿಕ ಜಾಲತಾಣಗಳಲ್ಲಿ ಸುಳ್ ಸುದ್ದಿ ಹಂಚಿದರೆ ಕಾನೂನು ಕ್ರಮ: ಎಸ್ಪಿ ಎಚ್ಚರಿಕೆ

sp g.k.mitunkumar
ಎಸ್ಪಿ ಜಿ.ಕೆ.ಮಿಥುನ್‌ಕುಮಾರ್
Published on

ಶಿವಮೊಗ್ಗ: ಹೊರ ರಾಜ್ಯಗಳಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ವಿಡಿಯೋ ತುಣುಕುಗಳು ರಾಜ್ಯಕ್ಕೆ ಸಂಬಂಧಿಸಿದ್ದಲ್ಲ. ನೈಜ ಸುದ್ದಿಗಳನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ಮೇಲೆ ನಿಗಾ ಇರಿಸಿದ್ದು, ಕಾನೂನು ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ವಾಟ್ಸ್‌ಆ್ಯಪ್, ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಂ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿಬಿಡಿವುದು ಕಾನೂನು ರೀತಿಯ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಪೊಲೀಸ್ ಇಲಾಖೆಯಿಂದ ನಿರಂತರವಾಗಿ ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಡಲಾಗಿದೆ. ಯಾವುದೇ ಪ್ರಚೋದನಾತ್ಮಕ ವಿಡಿಯೋಗಳನ್ನು ಹರಿಬಿಟ್ಟಿರುವುದು ಇಲಾಖೆಯ ಗಮನಕ್ಕೆ ಬಂದರೆ, ವಿಡಿಯೋಗಳನ್ನು ಹರಿಬಿಟ್ಟವರು ಈ ಬಗ್ಗೆ ಇಲಾಖೆಗೆ ಸೂಕ್ತ ಸ್ಪಷ್ಟನೆ ನೀಡಬೇಕು ಎಂದಿದ್ದಾರೆ.
ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿರುವುದು ಕಂಡುಬಂದಲ್ಲಿ ಅಂತಹ ವ್ಯಕ್ತಿಗಳು ಮತ್ತು ಗ್ರೂಪ್ ಅಡ್ಮಿನ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಾಗಾಗಿ ಸಾರ್ವಜನಿಕರು ಯಾವುದೇ ರೀತಿಯ ಸುಳ್ಳುಸುದ್ದಿಗಳಿಗೆ ಕಿವಿಗೊಡಬಾರದು. ಪ್ರಚೋದನೆಗೆ ಒಳಗಾಗಬಾರದು ಹಾಗೂ ಯಾವುದೇ ಸುಳ್ಳು, ಪ್ರಚೋದನಾತ್ಮಕ ವಿಡಿಯೋ, ಪೋಸ್ಟ್, ಸುದ್ದಿಗಳ ಸತ್ಯಾಸತ್ಯತೆಯನ್ನು ತಿಳಿಯದೇ ಫಾರ್ವರ್ಡ್, ಪೋಸ್ಟ್ ಅಥವಾ ಟ್ವೀಟ್ ಮಾಡಬೇಡಿ. ಸತ್ಯಾಸತ್ಯತೆ ಕುರಿತು ಇಲಾಖೆಯಿಂದ ಸ್ಪಷ್ಟನೆ ಪಡೆಯುವಂತೆ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net