ಹಕ್ಕು ಮತ್ತು ಕರ್ತವ್ಯ ಒಂದೇ ನಾಣ್ಯದ ಮುಖಗಳು

legal workshop in yalaburga koppal
ಯಲಬುರ್ಗಾದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹಿರಿಯ ಸಿವಿಲ್​ ನ್ಯಾಯಾಧೀಶ ರಂಗಸ್ವಾಮಿ ಉದ್ಘಾಟಿಸಿದರು. ತಹಸೀಲ್ದಾರ್​ ಬಸವರಾಜ ತೆನ್ನಳ್ಳಿ, ಸಹಾಯಕ ಸರ್ಕಾರಿ ಅಭಿಯೋಜಕ ರವಿ ಹುಣಸಿಮರದ, ಅಪರ ಸರ್ಕಾರಿ ವಕೀಲ ಮಲ್ಲನಗೌಡ ಪಾಟೀಲ್​, ಪ್ರಭಾರ ಬಿಇಒ ಅಶೋಕ ಗೌಡರ, ವಕೀಲ ಎಸ್​.ಎನ್​.ಶ್ಯಾಗೋಟಿ ಇದ್ದರು.
Published on

ಕೊಪ್ಪಳ : ವಿದ್ಯಾರ್ಥಿಗಳು ಕಾನೂನಿನ ಸಾಮಾನ್ಯ ಜ್ಞಾನ ಹೊಂದಬೇಕು ಎಂದು ಹಿರಿಯ ಸಿವಿಲ್​ ನ್ಯಾಯಾಧೀಶ ರಂಗಸ್ವಾಮಿ ಹೇಳಿದರು.

ಯಲಬುರ್ಗಾ ಪಟ್ಟಣದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್​ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಸಮಾನತೆ, ಸ್ವಾತಂತ್ರ್ಯ, ಶಿಕ್ಷಣ, ಬದುಕುವ, ಆಹಾರ, ಪ್ರತಿಭಟಿಸುವ, ಮಾತನಾಡುವ ಮತ್ತು ಇನ್ನಿತರ ಮೂಲಭೂತ ಹಕ್ಕು ನೀಡಲಾಗಿದೆ. ಸ್ವಸ್ಥ ಜೀವನಕ್ಕೆ ಅಬಶ್ಯವಾಗಿರುವ ಮೂಲಭೂತ ಹಕ್ಕುಗಳ ಬಗ್ಗೆ ಎಲ್ಲರೂ ತಿಳಿಯಬೇಕು. ಅದರೊಂದಿಗೆ ಕರ್ತವ್ಯಗಳನ್ನು ಪಾಲಿಸಬೇಕು. ಹಕ್ಕು ಮತ್ತು ಕರ್ತವ್ಯ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ನಿತ್ಯ ಜೀವನದಲ್ಲಿ ಕಾನೂನಿನ ಜ್ಞಾನ ತಿಳಿಯುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

ವಕೀಲರ ಸಂಘದ ತಾಲೂಕು ಅಧ್ಯಕ್ಷ ಪ್ರಕಾಶ ಬೆಲೇರಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ತಹಸೀಲ್ದಾರ್​ ಬಸವರಾಜ ತೆನ್ನಳ್ಳಿ, ಸಹಾಯಕ ಸರ್ಕಾರಿ ಅಭಿಯೋಜಕ ರವಿ ಹುಣಸಿಮರದ, ಅಪರ ಸರ್ಕಾರಿ ವಕೀಲ ಮಲ್ಲನಗೌಡ ಪಾಟೀಲ್​, ಪ್ರಭಾರ ಬಿಇಒ ಅಶೋಕ ಗೌಡರ, ಪ್ರಾಚಾರ್ಯ ಹನುಮಪ್ಪ ಉಪ್ಪಾರ, ವಕೀಲರಾದ ಎಸ್​.ಎನ್​.ಶ್ಯಾಗೋಟಿ, ಈರಣ್ಣ ಕೋಳೂರು, ಜಗದೀಶ ತೊಂಡಿಹಾಳ, ಸಂಗಮೇಶ ಅಂಗಡಿ, ಕಾನೂನು ಸೇವಾ ಸಮಿತಿ ಸಿಬ್ಬಂದಿ ರಾಘವೇಂದ್ರ ಕೋಳಿಹಾಳ, ವಿನಾಯಕ ಹಾಗೂ ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net