

ಬೆಂಗಳೂರು: ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಮಂಗಳವಾರ 16 ಅಬ್ಯರ್ತಿಗಳು 21 ನಾಮಪತ್ರ ಸಲ್ಲಿಸಿದ್ದಾರೆ. ಮೇ 9 ರಿಂದ ಈವರೆಗೆ ಒಟ್ಟು 29 ಅಭ್ಯರ್ಥಿಗಳು 40 ನಾಮಪತ್ರ ಸಲ್ಲಿಸಿದ್ದಾರೆ. ಮಂಗಳವಾರ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಒಬ್ಬ ಮಹಿಳೆ ಕೂಡ ನಾಮಪತ್ರ ಸಲ್ಲಿಸಿದ್ದಾರೆ.
ಈವರೆಗೆ ಬಿಜೆಪಿ 3, ಕಾಂಗ್ರೆಸ್ 5, ಜೆಡಿಎಸ್‌ನಿಂದ ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಮೇ 16 ಕೊನೆಯ ದಿನವಾಗಿದೆ.
ಜೆಡಿಎಸ್ ಒಂದು ಕ್ಷೇತ್ರ ಹೊರತುಪಡಿಸಿ ಮೂರೂ ಪಕ್ಷಗಳು ಈಗಾಗಲೇ ತನ್ನ ಅಭ್ಯರ್ಥಿಗಳನ್ನು ೋಷಿಸಿವೆ. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿ ನಾಲ್ಕು ಸ್ಥಾನಗಳಲ್ಲಿ ಜೆಡಿಎಸ್ 2 ಕ್ಷೇತ್ರಳಲ್ಲಿ ಸ್ಪರ್ಧಿಸಲಿವೆ.