ನೂತನ ಮುಖ್ಯಮಂತ್ರಿ ಘೋಷಣೆಗೆ ಕ್ಷಣಗಣನೆ; ಶಾಸಕಾಂಗ ಪಕ್ಷದ ಸಭೆ ಶುರು

Vidhana Soudha vvani
Published on

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಯಾರು ಎನ್ನುವ ಕುರಿತು ರಾಜ್ಯದ ಜನತೆ ಭಾರಿ ಕುತೂಹಲದಿಂದ ನೋಡುತ್ತಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಹೊಸ ಮುಖ್ಯಮಂತ್ರಿಯ ಘೋಷಣೆ ನಡೆಯಲಿದೆ.

ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಕ್ಯಾಪಿಟಲ್​ ಹೋಟೆಲ್​ನಲ್ಲಿ ಬಿಜೆಪಿ ಶಾಸಕಾಂಗ ಸಭೆ ಆರಂಭಗೊಂಡಿದೆ. ಇನ್ನು ಕೆಲವೇ ನಿಮಿಷಗಳಲ್ಲಿ ಸಭೆಯಲ್ಲಿ ಹೊಸ ಮುಖ್ಯಮಂತ್ರಿಯ ಹೆಸರು ಪ್ರಸ್ತಾಪವಾಗಲಿದ್ದು, ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಅಂತಿಮಗೊಳ್ಳಲಿದೆ. ಬಸವರಾಜ ಬೊಮ್ಮಾಯಿ, ಅರವಿಂದ ಬೆಲ್ಲದ ಸೇರಿ ಒಂದಷ್ಟು ಹೆಸರುಗಳು ಕೇಳಿಬರುತ್ತಿದ್ದು, ಇನ್ನು ಸ್ವಲ್ಪ ಹೊತ್ತಿನಲ್ಲಿ ಅಧಿಕೃತ ಘೋಷಣೆ ಹೊರಬೀಳಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net