

ಚೆನ್ನೈ: ದಳಪತಿ ವಿಜಯ್ ಅಭಿನಯದ 'ಲಿಯೋ' ಚಿತ್ರ ಥಿಯೇಟರ್ಗಳಲ್ಲಿ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ 12 ದಿನಗಳಲ್ಲಿ 540 ಕೋಟಿ ರೂ.ಕಲೆಕ್ಷನ್ ಮಾಡಿದೆ ಎಂದು ನಿರ್ಮಾಪಕರು ಈಗಾಗಲೇ ಘೋಷಿಸಿದ್ದಾರೆ. ಇದು ಸುಳ್ಳು ಎಂದು ಹಲವರು ಹೇಳುತ್ತಾರೆ. ಇದ್ಯಾವುದನ್ನೂ ಲೆಕ್ಕಿಸದೆ ಚಿತ್ರತಂಡ ಚಿತ್ರದ ಯಶಸ್ಸಿನ ಸಂಭ್ರಮದಲ್ಲಿದೆ.
ಇದನ್ನೂ ಓದಿ: ‘ಪುಷ್ಪ 2’ ಚಿತ್ರತಂಡದಿಂದ ಹೊರಬಿತ್ತು ಹೊಸ ಅಪ್ಡೇಟ್?
ಲಿಯೋ ಈ ವರ್ಷದ ಬಹು ನಿರೀಕ್ಷಿತ ಚಿತ್ರ. ಕಾರಣಾಂತರಗಳಿಂದ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಲಿಲ್ಲ. ಅದಕ್ಕಾಗಿಯೇ ಚಿತ್ರತಂಡ ಈಗ ವಿಜಯ್ ಅಭಿಮಾನಿಗಳೊಂದಿಗೆ ಸಕ್ಸಸ್ ಮೀಟ್ ಏರ್ಪಡಿಸಿದೆ. ಈ ಸಮಾರಂಭಕ್ಕೂ ತಮಿಳುನಾಡು ಸರ್ಕಾರ ಆರಂಭದಲ್ಲಿ ಅನುಮತಿ ನೀಡಿರಲಿಲ್ಲ. ಆದರೆ ಅಭಿಮಾನಿಗಳ ಒತ್ತಡದಿಂದಾಗಿ ಲಿಯೋ ವಿಜಯೋತ್ಸವಕ್ಕೆ ಅವಕಾಶ ನೀಡಬೇಕಾಯಿತು. ಈ ಬಗ್ಗೆ ಲಿಯೋ ತಂಡ ವಿಡಿಯೋ ಮೂಲಕ ಅಧಿಕೃತ ಘೋಷಣೆ ಮಾಡಿದೆ.
ಲೋಕೇಶ್ ಕನಕರಾಜ್ ನಿರ್ದೇಶನದ, ದಳಪತಿ ವಿಜಯ್ ಅಭಿನಯದ ಲಿಯೋ ಚಿತ್ರವು ಅ.19 ರಂದು ಬೆಳ್ಳಿತೆರೆಗೆ ಅಪ್ಪಳಿಸಿದ್ದು, ಈ ಚಿತ್ರದ ಯಶಸ್ಸಿಗಾಗಿ ಚಿತ್ರತಂಡ ಸಕ್ಸಸ್ ಮೀಟ್ ಅನ್ನು ಬುಧವಾರ(ನ.1) ಸಂಜೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದೆ.
ಕಾರ್ಯಕ್ರಮದ ಕಿರು ಪ್ರೋಮೋ ವಿಡಿಯೋವನ್ನು ಚಿತ್ರದ ನಿರ್ಮಾಪಕರು ಹಂಚಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಇಡೀ ಚಿತ್ರತಂಡ ಭಾಗವಹಿಸಲಿದೆ ಎಂದು ವರದಿಯಾಗಿದೆ. ಈ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮ ರದ್ದಾಗಿದ್ದ ಕಾರಣ ಸಕ್ಸಸ್ ಮೀಟ್ ಅದ್ಧೂರಿಯಾಗಿ ನಡೆಯಲಿದೆ.