ಕರ್ನಾಟಕ ವಿವಿ ಆವರಣದಲ್ಲಿ ಚಿರತೆ ಪ್ರತ್ಯಕ್ಷ; ಸೆರೆ ಹಿಡಿಯುವಂತೆ ವಿದ್ಯಾರ್ಥಿಗಳು ಮನವಿ

chitha
Published on

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಶುಕ್ರವಾರ ಸಂಜೆ ಚಿರತೆ ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ.

ಇಂದು ಸಂಜೆ 6.40ರ ಸುಮಾರಿಗೆ ಕವಿವಿ ಪತ್ರಿಕೋದ್ಯಮ ವಿಭಾಗದ ಬಳಿ ಚಿರತೆ ಕಾಣಿಸಿಕೊಂಡಿದೆ. ಸಂಶೋಧನಾ ವಿದ್ಯಾರ್ಥಿ ರವಿ ಪ್ರತ್ಯಕ್ಷವಾಗಿ ನೋಡಿದ್ದು, ರಸ್ತೆಯಲ್ಲಿ ಜಿಗಿದು ಹೋಗಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿದ್ಯಾರ್ಥಿಗಳು ತಕ್ಷಣ ಎಲ್ಲರಿಗೂ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆಗೂ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.

ವಿಶ್ವ ವಿದ್ಯಾನಿಯಲದ ಆವರಣದ ಪತ್ರಿಕೋದ್ಯಮದ ಬಳಿ ಚಿರತೆ ಕಾಣಿಸಿಕೊಂಡಿದೆ. ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದೇವೆ. ವಿದ್ಯಾರ್ಥಿಗಳು, ಭೋದಕ ಹಾಗೂ ಬೋಧಕೇತರ ಸಿಬ್ಬಂದಿ ಜಾಗರೂಕರಾಗಿರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net