ಅವರಿಬ್ಬರೇ ರಾಜಕಾರಣ ಮಾಡಲಿ, ಬೇರೆಯವರು ಬೇಡವೆ?; ಡಾ.ಜಿ.ಪರಮೇಶ್ವರ ತೀವ್ರ ಅಸಮಾಧಾನ|Let them both do politics, no one else?; Dr. G. Parameshwara is very upset

ggp1
Published on

ಬೆಂಗಳೂರು: ಅಧಿಕಾರ ಹಂಚಿಕೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಕಾಂಗ್ರೆಸ್‌ನಲ್ಲಿ ಪರ-ವಿರೋಧ ಚರ್ಚೆ (DCM DK Shivakumar's statement on power sharing is a pro-opposition debate in the Congress) ಹುಟ್ಟು ಹಾಕಿದೆ. ಅಧಿಕಾರ ಹಂಚಿಕೆ ಒಪ್ಪಂದವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರೆ, ಯಾವುದೇ ಒಪ್ಪಂದ ಆಗಿಲ್ಲ ಎಂದು ಸಿಎಂ ಸಿದ್ದಾರಾಮಯ್ಯ ಸಾರಾಸಗಟ ನಿರಾಕರಿಸಿದ್ದಾರೆ. ಈ ಹೇಳಿಕೆಗಳ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ(Dr G Parameswar) ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿರುವ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ ದೆಹಲಿ ಮತ್ತು ರಾಜ್ಯದಲ್ಲಿ ಇಬ್ಬರು, ಮೂವರನ್ನು ಕೇಳಿದ್ದೇನೆ. ಒಪ್ಪಂದ ಆಗಿದೆ ಅಂತ ಯಾರೂ ಹೇಳಿಲ್ಲ.

ಡಿ.ಕೆ.ಶಿವಕುಮಾರ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಅಂತಹ ಒಪ್ಪಂದ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ. ಈಗ ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು ಎಂದು ಪ್ರಶ್ನಿಸಿದ್ದಾರೆ.

ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಲಿ. ಬೇರೆಯವರು ಇರುವುದೇ ಬೇಡವೇ?(Let them both do politics, no one else?; Dr. G. Parameshwara is very upset) ಆಕ್ರೋಶ ಹೊರ ಹಾಕಿದ್ದಾರೆ.

ಅಧಿಕಾರ ಹಂಚಿಕೆ ಕುರಿತು ಆ ರೀತಿ ಒಪ್ಪಂದ ಆಗಿರಲು ಸಾಧ್ಯವಿಲ್ಲ. ಆದ್ದರಿಂದ ಹೈಕಮಾಂಡ್ ಅಂತಿಮವಾಗಿ ಏನು ತೀರ್ಮಾನ ಮಾಡುತ್ತದೆ ಅದಕ್ಕೆ ನಾವು ಬದ್ಧವಾಗಿರುತ್ತೇವೆ. ನಾವ್ಯಾರು ಕೂಡ ಹೈಕಮಾಂಡ್ ಬಿಟ್ಟು ಹೋದವರ್ಲ. ಹೈಕಮಾಂಡ್ ಏನು ತೀರ್ಮನ ಮಾಡುತ್ತದೆ ಅದನ್ನು ಒಪ್ಪಿಕೊಳ್ಳುತ್ತೇವೆ ಎಂದು ತಿಳಿಸಿದರು.

ಯಾವುದೇ ಗೊಂದಲ ಇಲ್ಲವೇ ಇಲ್ಲ

ಕೆಪಿಸಿಸಿ ಮತ್ತು ಸ್ವಾಭಿಮಾನಿಗಳ ಒಕ್ಕೂಟ ಒಟ್ಟಾಗಿ ಸಮಾವೇಶ ಮಾಡುತ್ತಿದ್ದು, ಯಾವುದೇ ಗೊಂದಲಗಳು ಇಲ್ಲ. ಕಾಂಗ್ರೆಸ್ ಮತ್ತು ಸರ್ಕಾರದ ಮೇಲೆ ಸ್ವಾಭಿಮಾನಿ ಒಕ್ಕೂಟಕ್ಕೆ ಸಹಾನುಭೂತಿ ಇದೆ. ಹೀಗಾಗಿ ಒಟ್ಟಿಗೆ ಸಮಾವೇಶ ಮಾಡುತ್ತಿದ್ದು, ಇದರಲ್ಲಿ ಯಾವುದೇ ಗೊಂದಲವಿಲ್ಲ. ಗೊಂದಲ ಇದೆ ಎಂಬಂತೆ ಅವರಿರವರು ಸೃಷ್ಟಿ ಮಾಡಿದ್ದಾರೆ ಎಂದು ಹೇಳಿದರು.

ವಿರೋಧ ಪಕ್ಷಗಳ ಆಪಾದನೆಗೆ ಉತ್ತರ

ನಾವು ರಾಜ್ಯದ ಜನತೆಗೆ ಚುನಾವಣೆಯ ಸಂದರ್ಭದಲ್ಲಿ ರಾಜಕೀಯವಾಗಿ ಏನೆಲ್ಲ ಮಾತನಾಡಿದ್ದೇವೆ, ಅದೆಲ್ಲವನ್ನು ನಾವು ಜನಗಳಿಗೆ ಹೇಳಬೇಕು. ಸರ್ಕಾರದ ಕಾರ್ಯಕ್ರಮಗಳಲ್ಲಿ ಅನೇಕ ರಾಜಕೀಯ ವಿಚಾರಗಳನ್ನು ಪ್ರಸ್ತಾಪ ಮಾಡಲು ಆಗುವುದಿಲ್ಲ. ಅದಕ್ಕಾಗಿ ಈ ಸಮಾವೇಶದಲ್ಲಿ ರಾಜಕೀಯ ವಿಚಾರಗಳನ್ನು ಪ್ರಸ್ತಾಪ ಮಾಡುತ್ತೇವೆ. ಜನಗಳಿಗೆ ಸತ್ಯಾಂಶ ಗೊತ್ತಾಗಬೇಕು. ಅನೇಕ ವಿಚಾರದಲ್ಲಿ ವಿರೋಧ ಪಕ್ಷದವರು ಮಾಡುವ ಆಪಾದನೆಗಳಿಗೆ ರಾಜಕೀಯವಾಗಿ ಉತ್ತರ ಕೊಡುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಸಮಾವೇಶ ಆಗಿರುವುದರಿಂದ ಯಾವುದೇ ಬಣ ಇಲ್ಲ. ಬಿಜೆಪಿಯಲ್ಲಿ ಮೂರು ಬಣ ಮಾಡಿಕೊಂಡಿದ್ದರಲ್ಲ. ಆ ರೀತಿ ನಮ್ಮ ಪಕ್ಷದಲ್ಲಿ ಬಣ ಇಲ್ಲ. ನಾವೆಲ್ಲ ಒಟ್ಟಿಗಿದ್ದೇವೆ. ಒಟ್ಟಾಗಿ ಆಡಳಿತ ಮಾಡುತ್ತಿದ್ದೇವೆ. ಬಿಜೆಪಿ ಮತ್ತು ಜೆಡಿಎಸ್‌ನವರು ನಮ್ಮನ್ನು ಜನಸಮುದಾಯದಿಂದ ಬೇರ್ಪಡಿಸಲು ಪ್ರಯತ್ನ ಮಾಡಬಹುದು. ಅದು ಸಾಧ್ಯವಾಗುವುದಿಲ್ಲ ಎಂದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಅನೇಕ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಾರೆ. ಅದಕ್ಕ್ಲೆ ನಾವು ಉತ್ತರ ಕೊಡಬೇಕಿಲ್ಲ. ಅವರು ತಮ್ಮ ಅಭಿಪ್ರಾಯವನ್ನು ಹೇಳಿಕೊಂಡಿರುತ್ತಾರೆ. ಸಂದರ್ಭ ಬಂದಾಗ ನಾವು ಉತ್ತರ ಕೊಡುತ್ತೇವೆ ಪ್ರಶ್ನೆಯೊಂದಕ್ಕೆ ಡಾ.ಪರಮೇಶ್ವರ ಪ್ರತಿಕ್ರಿಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net