ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಸಿಗಲಿ

ಹನಗೋಡು ಹೋಬಳಿಯ ನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆ, ನೇರಳಕುಪ್ಪೆ ಶಾಲೆಯಲ್ಲಿ ದಾನಿಗಳ ಒದಗಿಸಿದ್ದ ಕಲಿಕಾ ಸಾಮಗ್ರಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಬಿಇಒ ಎಸ್. ರೇವಣ್ಣ, ಮುಖ್ಯಶಿಕ್ಷಕ ಕುಮಾರಸ್ವಾಮಿ, ಉಮಾ, ಪ್ರೀತಿ ಮತ್ತಿತರರಿದ್ದರು.
ಹನಗೋಡು ಹೋಬಳಿಯ ನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆ, ನೇರಳಕುಪ್ಪೆ ಶಾಲೆಯಲ್ಲಿ ದಾನಿಗಳ ಒದಗಿಸಿದ್ದ ಕಲಿಕಾ ಸಾಮಗ್ರಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಬಿಇಒ ಎಸ್. ರೇವಣ್ಣ, ಮುಖ್ಯಶಿಕ್ಷಕ ಕುಮಾರಸ್ವಾಮಿ, ಉಮಾ, ಪ್ರೀತಿ ಮತ್ತಿತರರಿದ್ದರು.
Published on

ಹನಗೋಡು: ಉತ್ತಮ ಕಾರ್ಯಸೂಚಿಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡಲು ಶಿಕ್ಷಕರು ಮುಂದಾಗಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರೇವಣ್ಣ ಸಲಹೆ ನೀಡಿದರು.

ಹನಗೋಡು ಹೋಬಳಿಯ ನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆ, ನೇರಳಕುಪ್ಪೆ ಶಾಲೆಯಲ್ಲಿ ದಾನಿಗಳ ಸಹಕಾರದೊಂದಿಗೆ ಕಲಿಕಾ ಸಾಮಗ್ರಿ ವಿತರಿಸಿ ಮಾತನಾಡಿದರು.

ಸರ್ಕಾರವು ವಿದ್ಯಾರ್ಥಿಗಳಿಗೆ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದೆ. ಎಲ್ಲಾ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆಗೆ ಶಿಕ್ಷಣದ ಭದ್ರ ಬುನಾದಿ ಅಗತ್ಯ. ಜಕೀಯ ಧುರೀಣ, ಸಮಾಜಸೇವಕ ಯಾರೇ ಇರಲಿ ಅವರ ಹಿಂದೆ ಒಬ್ಬ ಗುರು ಇದ್ದೇ ಇರುತ್ತಾರೆ. ಸಮಾಜದಲ್ಲಿ ಗುರುಗಳಿಗೆ ತನ್ನದೇ ಆದ ಮಾನ್ಯತೆ ಇದ್ದು, ಉತ್ತಮ ಸಮಾಜ ನಿರ್ಮಾಣ ಮಾಡುವ ಮಹತ್ವದ ಜವಾಬ್ದಾರಿಯಿದೆ ಎಂದರು.

ವಿದ್ಯಾರ್ಥಿಗಳು ಪ್ರತಿ ದಿನ ಶಾಲೆಗೆ ತಪ್ಪದೇ ಹಾಜರಾಗುವುದರೊಂದಿಗೆ, ವೈಯಕ್ತಿಕ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಚಿಕ್ಕತಾಯಮ್ಮ ಮತ್ತು ಕುಟುಂಬದವರು ಕಲಿಕಾ ಸಾಮಗ್ರಿ ಬೆಲ್ಟು, ಟೈ , ವಿದ್ಯಾರ್ಥಿ ಗುರುತಿನ ಚೀಟಿಗಳನ್ನು ವಿತರಿಸಿದರು. ಅಲ್ಲದೆ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 600ಕ್ಕೂ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಶೇಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದರು. ಕಾರ್ಯಕ್ರಮದಲ್ಲಿ ದಾನಿಗಳಾದ ವರ್ಗೀಸ್, ಮಂಜುನಾಥ್, ಮುಖ್ಯಶಿಕ್ಷಕ ುಮಾರಸ್ವಾಮಿ, ಶಿಕ್ಷಣ ಸಂಯೋಜಕ ಕೇಶವಮೂರ್ತಿ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಧರ್ಮರಾಜ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net