ರೈತರು ಬೆಳೆ ವಿಮೆ ಮಾಡಿಸಿಕೊಳ್ಳಲಿ

ರೈತರು ಬೆಳೆ ವಿಮೆ ಮಾಡಿಸಿಕೊಳ್ಳಲಿ
Published on

ಹಂಪಾಪುರ: ಸರ್ಕಾರ ಬೆಳೆ ವಿಮೆ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯನ್ನು ರೈತರು ಸದುಪಯೋಗ ಪಡೆದು ಕೊಳ್ಳಬೇಕು ಎಂದು ಕೃಷಿ ಅಧಿಕಾರಿ ಸಿದ್ದಪ್ಪಸ್ವಾಮಿ ಹೇಳಿದರು.

ಹಂಪಾಪುರ ರೈತ ಸಂಪರ್ಕ ಕೇಂದ್ರ ಆವರಣದಲ್ಲಿ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಮಾಹಿತಿ ರಥಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದರು.

ಐದು ದಿನಗಳ ಕಾಲ ಹಂಪಾಪುರ ಹೋಬಳಿಯ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಚಾರ ರಥ ಸಂಚರಿಸುತ್ತದೆ. ಎಲ್ಲ ರೈತರು ಬೆಳೆ ವಿಮೆ ಮಾಡಿಸಲು ಮುಂದಾಗಬೇಕು ಎಂದರು.

ಸಹಾಯಕ ತಾಂತ್ರಿಕ ವ್ಯವಸ್ಥಾಪಕಿ ಸಿ.ಎಂ.ರಕ್ಷಿತಾ ಮಾತನಾಡಿ, ರೈತರು ಹೆಸರುಕಾಳು, ಉದ್ದು, ಎಳ್ಳು, ಭತ್ತ, ಮುಸುಕಿನಜೋಳ, ಹತ್ತಿ, ಇನ್ನಿತರ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

ಎಚ್.ಡಿ. ಕೋಟೆ ತಾಲೂಕು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಎಚ್.ಬಿ. ರಾಜೇಶ್, ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net