ಕಾವೇರಿ ವಿಷಯದಲ್ಲಿ ಮೋದಿ ಮಧ್ಯಪ್ರವೇಶಿಸಲಿ

protest
ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ಕಲ್ಲೂರು ಮೇಘರಾಜ್, ಜಿ.ವಿ.ಮಂಜುಳಾ, ಎಚ್.ಎಂ.ಸಂಗಯ್ಯ, ಎನ್.ನಾಗೇಶ್ ರಾವ್, ನರಸಿಂಹಮೂರ್ತಿ, ಶಂಕ್ರಾನಾಯ್ಕಾ ಮುಂತಾದವರು ಕಪ್ಪು ಬಾವುಟದೊಂದಿಗೆ ಪ್ರತಿಭಟಿಸಿದರು.
Published on

ಶಿವಮೊಗ್ಗ: ಕೆಆರ್‌ಎಸ್ ಜಲಾಶಯದಲ್ಲೇ ನೀರಿನ ಸಂಗ್ರಹವಿಲ್ಲದಿರುವ ಸಂದರ್ಭದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕಾಗಿ ಬಂದಿದ್ದು ದುರದೃಷ್ಟಕರ ಎಂದು ಆಕ್ರೋಶ ವ್ಯಕ್ತಪಡಿಸಿದ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ಪ್ರಮುಖರು ಶುಕ್ರವಾರ ಕಪ್ಪು ಬಾವುಟದೊಂದಿಗೆ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿ ದಿನ ಐದು ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿರುವುದು ರಾಜ್ಯದ ಪಾಲಿಗೆ ಮರಣಶಾಸನವಾಗಿದೆ. ಮಂಡ್ಯ ಹಾಗೂ ಮೈಸೂರು ಭಾಗದ ರೈತರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಂತದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು. ಕರ್ನಾಟಕ ಹಾಗೂ ತಮಿಳುನಾಡು ಹೊರತುಪಡಿಸಿ ಬೇರೆ ರಾಜ್ಯಗಳ ತಜ್ಞರ ಸಮಿತಿಯನ್ನು ರಚನೆ ಮಾಡಿ ವಾಸ್ತವ ಸಂಗತಿ ಅರಿಯುವ ಪ್ರಯತ್ನ ಮಾಡಬೇಕು. ಈ ಸಮಿತಿ ನಮ್ಮ ರಾಜ್ಯ, ತಮಿಳುನಾಡಿನಲ್ಲಿ ಅಧ್ಯಯನ ನಡೆಸಿ ವರದಿ ನೀಡಬೇಕು ಎಂದು ಆಗ್ರಹಿಸಿದರು.
ಇಂದು ಕಾವೇರಿ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಆಕ್ರೋಶದ ಕಟ್ಟೆಯೊಡೆದಿದೆ. ಅಶಾಂತಿ ವಾತಾವರಣ ಸೃಷ್ಟಿಯಾಗುವ ಭೀತಿ ಎದುರಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಇಂತಹ ಸನ್ನಿವೇಶಗಳಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಲು ಅವಕಾಶವಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಪರಿಹಾರ ಸೂತ್ರ ರಚಿಸಬೇಕೆಂದರು.
ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್, ಟ್ರಸ್ಟಿಗಳಾದ ಎಚ್.ಎಂ.ಸಂಗಯ್ಯ, ಎನ್.ನಾಗೇಶ್ ರಾವ್, ಕೆ.ಆರ್.ಶಿವಣ್ಣ, ನರಸಿಂಹಮೂರ್ತಿ, ಬಿ.ಟಿ.ಸೋಮಶೇಖರಯ್ಯ, ಜಿ.ವಿ.ಮಂಜುಳಾ, ಶಂಕ್ರಾನಾಯ್ಕಾ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net