ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಾಧಕರಾಗಲಿ

ಬೆಟ್ಟದಪುರದ ಅಕ್ಕಮಹಾದೇವಿ ಕ್ರೀಡಾಂಗಣದಲ್ಲಿ ಶಿಕ್ಷಣ ಇಲಾಖೆ ಹಾಗೂ ಎಸ್‌ಎಂಎಸ್ ವಿದ್ಯಾಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದ ವೇದಿಕೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
ಬೆಟ್ಟದಪುರದ ಅಕ್ಕಮಹಾದೇವಿ ಕ್ರೀಡಾಂಗಣದಲ್ಲಿ ಶಿಕ್ಷಣ ಇಲಾಖೆ ಹಾಗೂ ಎಸ್‌ಎಂಎಸ್ ವಿದ್ಯಾಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದ ವೇದಿಕೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
Published on

ಬೆಟ್ಟದಪುರ: ವಿದ್ಯಾರ್ಥಿ ಜೀವನದಲ್ಲಿ ಸಮಯ ಪಾಲನೆ ಬಹಳ ಮುಖ್ಯವಾಗಿದೆ. ಸಮಯ ಯಾರನ್ನೂ ಕಾಯುವುದಿಲ್ಲ. ಅದರಂತೆ ವಿದ್ಯಾರ್ಥಿಗಳು ಜೀವನದಲ್ಲಿ ಕ್ರೀಡಾಪಟುಗಳಾಗಿ ಸಾಧಿಸುವುದರ ಜತೆಗೆ ಶರೀರವನ್ನು ಆರೋಗ್ಯಕರವಾಗಿ ಇಟ್ಟುಕೊಳ್ಳಲು ಕ್ರೀಡಾ ಚಟುವಟಿಕೆ ನೆರವಾಗಲಿದೆ ಎಂದು ಬೆಟ್ಟದಪುರ ಕನ್ನಡ ಮಠದ ಶ್ರೀ ಚನ್ನಬಸವ ದೇಶಿ ಕೇಂದ್ರ ಸ್ವಾಮೀಜಿ ಹೇಳಿದರು.

ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಅಕ್ಕಮಹಾದೇವಿ ಕ್ರೀಡಾಂಗಣದಲ್ಲಿ ಶಿಕ್ಷಣ ಇಲಾಖೆ ಹಾಗೂ ಎಸ್‌ಎಂಎಸ್ ವಿದ್ಯಾಸಂಸ್ಥೆ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಮಾತನಾಡಿದ ಅವರು, ಕ್ರಿ?ಡಾಪಟುಗಳು ತೀರ್ಪುಗಾರರು ಕೊಡುವ ತೀರ್ಪನ್ನು ಒಪ್ಪಿಕೊಳ್ಳುವುದರ ಜತೆಗೆ ಸೋಲಿನ ಆತ್ಮಾಲೋಕನ ಮಾಡಿಕೊಳ್ಳಬೇಕೆ ಹೊರತು ನಿರಾಸೆಯಾಗಬಾರದು. ಶಾಲೆಯಲ್ಲಿ ಇಡೀ ವರ್ಷ ಕಠಿಣ ಶ್ರಮ ವಹಿಸಿ ಅಭ್ಯಾಸ ಮಾಡಿದಾಗ ಕ್ರೀಡಾಕೂಟದಲ್ಲಿ ಜಯಗಳಿಸಲು ಸಾಧ್ಯ ಎಂದು ಹೇಳಿದರು.

ಬೆಟ್ಟದಪುರ ಪೊಲೀಸ್ ಠಾಣೆಯ ಪಿಎಸ್ ಅಜಯ್ ಕುಮಾರ್ ಮಾತನಾಡಿ, ದೈಹಿಕವಾಗಿ ಆರೋಗ್ಯದಿಂದಿದ್ದರೆ ಮಾತ್ರವೇ ಮಾನಸಿಕವಾಗಿಯೂ ಸದೃಢರಾಗಿರಲು ಸಾಧ್ಯ ಎಂಬ ಸತ್ಯ ಅರಿತು ಪಠ್ಯದಷ್ಟೇ ಪ್ರಮುಖವಾಗಿರುವ ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು. ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ವೃದ್ಧಿಸಲಿದೆ. ಅಲ್ಲದೆ ಕ್ರೀಡೆಯು ದೇಶದ ಯುವಜನರ ನಡುವೆ ಒಗ್ಗಟ್ಟು ಮತ್ತು ಸಹಕಾರ ಮನೋಭಾವ ಬೆಳೆಸುತ್ತದೆ. ತಂಡದ ಸ್ಫೂರ್ತಿಯನ್ನು ಹೆಚ್ಚಿಸುವುದರ ಜತೆಗೆ ದೇಶಕ್ಕಾಗಿ ಒಟ್ಟಾಗಿ ನಿಲ್ಲುವ ಮತ್ತು ಗೆಲ್ಲುವ ಪ್ರವೃತ್ತಿ ಉತ್ತೇಜಿಸುವ ಮೂಲಕ ದೇಶಾಭಿಮಾನವನ್ನು ಮೂಡಿಸುತ್ತದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ರವಿಪ್ರಸನ್ನ, ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜಶೇಖರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹೊಸಳ್ಳಿ ಕೃಷ್ಣೇಗೌಡ, ಮುಖ್ಯಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ನಾಗಶೆಟ್ಟಿ, ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ದೇವರಾಜು, ಅನುದಾನಿತ ಶಾಲೆ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಕಿಶೋರ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ್ ನಾಯಕ, ಎಸ್‌ಂಎಸ್ ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ವಿ ಮಂಜುನಾಥ್, ಕಾರ್ಯದರ್ಶಿ ಛಾಯಾ, ದೈಹಿಕ ಪರಿವೀಕ್ಷಕ ರಮೇಶ್, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ಚಂದ್ರಶೇಖರ್, ಸುರೇಶ್, ಪ್ರಾಂಶುಪಾಲ ರಾಜು, ವಿವಿಧ ಶಾಲೆಯ ಮುಖ್ಯಶಿಕ್ಷಕರಾದ ಮಹೇಶ್, ಮೇರಿ, ವೆಂಕಟೇಶ್, ದೇವರಾಜು, ವಿಜಯಕುಮಾರ್, ಮುಖಂಡ ಬಸವರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net