ಬಂಟ ಸಮುದಾಯ ಸಂಘಟಿತವಾಗಲಿ

23hos1p bantara sanga
ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ನಿವಾಸಿ ಪುಟ್ಟಮ್ಮ ಅವರನ್ನು ತಾಲೂಕು ಬಂಟರ ಸಂಘದ ಅಧ್ಯಕ್ಷ ದಿವಾಕರ ಶೆಟ್ಟಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಚಂದ್ರಶೇಖರ ಶೆಟ್ಟಿ, ಚಂದ್ರಶೆಟ್ಟಿ ಇತರರಿದ್ದರು.
Published on

ಹೊಸನಗರ: ಸಮುದಾಯವು ಸಮಾಜದಲ್ಲಿ ಮಂಚೂಣಿಗೆ ಬರಲು ಸಂಘಟನೆ ಮುಖ್ಯ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ದಿವಾಕರ ಶೆಟ್ಟಿ ಹೇಳಿದರು.

ಬಂಟರ ಸಂಘಟನೆಗಾಗಿ ತಾಲೂಕಿನಲ್ಲಿ ಸಮುದಾಯದ ಪ್ರಮುಖರನ್ನು ಭೇಟಿ ಮಾಡಿ ಮಾತನಾಡಿ, ಕಲೆ, ಸಾಹಿತ್ಯ, ರಾಜಕೀಯ ಮತ್ತು ಉದ್ಯಮದಲ್ಲಿ ಬಂಟ ಸಮುದಾಯದ ಕೊಡುಗೆ ಅಪಾರ. ಆದರೆ ಸಂಘಟನೆ ವಿಚಾರದಲ್ಲಿ ಕ್ರಿಯಾಶೀಲವಾಗಬೇಕಿದೆ ಎಂದು ತಿಳಿಸಿದರು.

ತಾಲೂಕಿನ ಮಾಸ್ತಿಕಟ್ಟೆಯಲ್ಲಿ ಅನ್ನನಾಳದ ಕ್ಯಾನ್ಸರ್‌ನಿಂದ ಬಳಲುತ್ತಿರುವ ವೃದ್ಧೆ ಪುಟ್ಟಮ್ಮ ಕುಟುಂಬಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಬಡ ಕುಟುಂಬ ಸಾಲ ಮಾಡಿ 4 ಲಕ್ಷ ರೂ.ಗೂ ಅಧಿಕ ವೆಚ್ಚ ಮಾಡಿದೆ. ಶಾಸಕ ಆರಗ ಜ್ಞಾನೇಂದ್ರ ಅವರು ಮುಖ್ಯಮಂತ್ರಿ ಪರಿಹಾರ ನಿಧಿಗೆ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಪರಿಹಾರ ನಿಧಿ ನೀಡುವಂತೆ ಆಗ್ರಹಿಸಿದರು.

ಯಡೂರು, ಸುಳುಗೋಡು, ಹುಲಿಕಲ್ ಭಾಗಗಳಿಗೆ ಸಂಘಟನೆ ಹಿನ್ನೆಲೆಯಲ್ಲಿ ಭೇಟಿ ನೀಡಿದರು. ಉಪಾಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಾಗರಾಜ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಚಂದ್ರ ಶೆಟ್ಟಿ, ಶರತ್ ಶೆಟ್ಟಿ, ಗಣಪತಿ ಶೆಟ್ಟಿ, ನವೀನ್ ಶೆಟ್ಟಿ, ವಿಜಯ ಶೆಟ್ಟಿ, ಮಾಸ್ತಿಕಟ್ಟೆ ಮತ್ತು ಯಡೂರು ಭಾಗದ ಬಂಟ ಸಮುದಾಯದ ಪ್ರಮುಖರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net