ಸಿಎಂ ರಾಜೀನಾಮೆ ನೀಡಿ ತನಿಖೆ ಎದುರಿಸಲಿ

ex dcm k.s.eshwarappa
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
Published on

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನನ್ನ ಮೇಲೆ ಆರೋಪ ಕೇಳಿ ಬಂದಿತ್ತು. ಆ ವೇಳೆ ನಾನು ರಾಜೀನಾಮೆ ನೀಡಿದ್ದೆ. ಸಿದ್ದರಾಮಯ್ಯ ಕೂಡ ಈಗ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಒತ್ತಾಯಿಸಿದರು.
ನನ್ನ ವಿರುದ್ಧ ಕೇಳಿ ಬಂದಿದ್ದ ಪ್ರಕರಣದಲ್ಲಿ ನನಗೆ ಕ್ಲಿನ್ ಚಿಟ್ ಕೂಡ ಸಿಕ್ಕಿತು. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೇ ಆರೋಪ ಬಂದಿದೆ. ನೀವೇಕೆ ರಾಜೀನಾಮೆ ನೀಡುತ್ತಿಲ್ಲ. ನಿಮಗೊಂದು ಕಾನೂನು, ನನಗೊಂದು ಕಾನೂನು ಇದೆಯಾ? ನನ್ನ ವಿರುದ್ಧ ನೀವೇ ಹೋರಾಟ ಮಾಡಿದ್ರಿ. ಮುಖ್ಯಮಂತ್ರಿಯಾಗಿ ಡಬಲ್ ಸ್ಟಾೃಂಡ್ ತೆಗೆದುಕೊಳ್ಳಬೇಡಿ. ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ. ಆರೋಪ ಮುಕ್ತವಾದರೆ ಮತ್ತೆ ಮುಖ್ಯಮಂತ್ರಿ ಆಗಿ ಎಂದು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net