ಕಾಂಗ್ರೆಸ್ ದೇಶದ್ರೋಹಿಗಳ ರಕ್ಷಣೆ ಗ್ಯಾರಂಟಿ ಘೋಷಿಸಲಿ: ಬಿ.ವೈ ವಿಜಯೇಂದ್ರ

bsy
Published on

ಬೆಂಗಳೂರು: ರಾಜ್ಯಸಭೆ ಸದಸ್ಯ ಕಾಂಗ್ರೆಸ್‌ನ ಸೈಯದ್‌ ನಾಸಿರ್‌ ಹುಸೇನ್‌ ಬೆಂಬಲಿಗರು ವಿಧಾನಸೌಧದ ಮೊಗಸಾಲೆಯಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದಾರೆ. ಸಾಕ್ಷಿ ಆಧಾರಗಳು ಇದ್ದರೂ ಕೂಡ ಪಾಕಿಸ್ತಾನಕ್ಕೆ ಜಿಂದಬಾದ್​ ಎಂದು ಕೂಗಿದವರವನ್ನು ಬಂಧಿಸಲು ಕಾಂಗ್ರೆಸ್​ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ದೇಶದ್ರೋಹಿಗಳನ್ನು ಬಂಧಿಸಲು ಹಿಂದೆಮುಂದೆ ಯೋಚಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಕಣ್ಣೆದುರೇ ಸಾಕ್ಷಿಗಳಿದ್ದರೂ ದೇಶದ್ರೋಹಿಗಳನ್ನು ಬಂಧಿಸಲು ತನಿಖೆ ನಡೆಸುತ್ತೇವೆ ಎಂದು ಕಾಂಗ್ರೆಸ್​ ಹೇಳಿರುವುದು ಹಾಸ್ಯಾಸ್ಪದ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರದ ಇಂತಹ ನಡವಳಿಕೆ ನೋಡಿದರೆ ಕಾಂಗ್ರೆಸ್ ಐದು ಗ್ಯಾರಂಟಿಗಳ ಜೊತೆಗೆ ಆರನೆಯದಾಗಿ ದೇಶದ್ರೋಹಿಗಳ ರಕ್ಷಣೆಯ ಗ್ಯಾರಂಟಿ ಕೂಡ ಘೋಷಿಸಿರುವಂತೆ ಕಾಣುತ್ತಿದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net