ವಿದ್ಯಾರ್ಥಿಗಳಿಗೆ ಗುರಿ ಮುಖ್ಯವಾಗಲಿ

srl (1)
ಶಿರಾಳಕೊಪ್ಪ ಪಟ್ಟಣದ ವೈಭವ ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ಆರಂಭಿಸಿರುವ ವಿಜ್ಞಾನ ಪ್ರಯೋಗಾಲಯವನ್ನು ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ ಉದ್ಘಾಟಿಸಿದರು. ಎಸ್.ವಿ.ರೂಪಾ, ಶಿವಣ್ಣ, ಶೇಷಗಿರಿ, ಸುನಿಲಕುಮಾರ್, ಪೃಥ್ವಿರಾಜ್ ಇತರರಿದ್ದರು.
Published on

ಶಿರಾಳಕೊಪ್ಪ: ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ದೃಷ್ಟಿಯಿಂದ ಸರ್ಕಾರೇತರ ಸಂಸ್ಥೆಗಳು ಸಾಕಷ್ಟು ಶ್ರಮವಹಿಸುತ್ತಿವೆ. ವಿದ್ಯಾರ್ಥಿಗಳು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ ಹೇಳಿದರು.

ಪಟ್ಟಣದ ವೈಭವ ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ಆರಂಭಿಸಿರುವ ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಿ ಮಾತನಾಡಿದ ಅವರು, ಪಾಲಕರ ಆಸೆಯಂತೆ ವಿದ್ಯಾರ್ಥಿಗಳು ಹಲವಾರು ಆಲೋಚನೆ, ಯೋಜನೆಗಳನ್ನು ಇಟ್ಟುಕೊಂಡು ವಿದ್ಯಾಭ್ಯಾಸ ಮಾಡಲು ಬರುತ್ತಾರೆ. ಆದರೆ ಅದನ್ನು ಸಲವಾಗಿಸಿಕೊಳ್ಳಲು ಗುರಿ ಇಟ್ಟುಕೊಳ್ಳುವುದು ಬಹಳ ಮುಖ್ಯ ಎಂದರು.

ಕ್ರಿಯಾಶೀಲತೆ ಸತತ ಪ್ರಯತ್ನ ಮತ್ತು ಪರಿಶ್ರಮದಿಂದ ಗುರಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿ, ರಸಾಯನಶಾಸ್ತ್ರ, ಜೀವಶಾಸ್ತ್ರ, ಭೌತಶಾಸ್ತ್ರ ಮತ್ತು ಕಂಪ್ಯೂಟರ್ ಲ್ಯಾಬ್‌ಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಾಚಾರ್ಯೆ ಎಸ್.ವಿ.ರೂಪಾ, ಕಾರ್ಯದರ್ಶಿ ಶಿವಣ್ಣ, ಉಪನ್ಯಾಸಕ ಎ.ಸಿ.ಶೇಷಗಿರಿ, ಸುನಿಲಕುಮಾರ್, ಪೃಥ್ವಿರಾಜ್, ಜಯಪ್ರಕಾಶ, ಪುನೀತ್‌ಕುಮಾರ್, ವೆಂಕಟೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net