ಸದಾಶಿವ ಆಯೋಗದ ವರದಿ ಜಾರಿಯಾಗಲಿ

01 KRN-1
ಕೆ.ಆರ್.ನಗರದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಶಾಸಕ ಡಿ.ರವಿಶಂಕರ್ ಅವರಿಗೆ ಮನವಿ ಸಲ್ಲಿಸಲಾಯಿತು. ನಟರಾಜು, ರಾಜೇಶ್, ವಿ.ಸುರೇಶ್ ಮಧುವನ, ಎಂ.ಎಸ್.ಮಲ್ಲೇಶ್, ಎಂ.ಎಸ್.ನಂಜುಂಡಸ್ವಾಮಿ, ಮಧುವನಹಳ್ಳಿ ರವಿಕುಮಾರ್, ವೆಂಕಟೇಶ್, ಮಹದೇವ್, ರವಿಪೂಜಾರಿ, ಮಧುವನಹಳ್ಳಿನಾಗೇಂದ್ರ, ಪ್ರದೀಪ್, ಕುಮಾರ್ ಇದ್ದರು.
Published on

ಕೆ.ಆರ್.ನಗರ: ಹೆಚ್ಚು ಜನಸಂಖ್ಯೆ ಇದ್ದರೂ ಪರಿಶಿಷ್ಟ ಸಮುದಾಯ ಹೆಚ್ಚು ಹಿಂದುಳಿದಿದ್ದು, ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿರುವ ಮಾದಿಗ ಸೇರಿದಂತೆ ಇತರ ಸಮುದಾಯಗಳಿಗೆ ನ್ಯಾಯ ಒದಗಿಸಲು ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ಒಳ ಮೀಸಲಾತಿ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕು ಎಂದು ಅಖಿಲ ಭಾರತ ಜೈಭೀಮ್ ದಲಿತ ಹೋರಾಟ ಸಮಿತಿ ಜಿಲ್ಲಾ ಕಾರ್ಯಧ್ಯಕ್ಷ ವಿ.ಸುರೇಶ್ ಮಧುವನ ಆಗ್ರಹಿಸಿದರು.

ಎ.ಜೆ.ಸದಾಶಿವ ಆಯೋಗ ವರದಿ ಜಾರಿಗಾಗಿ ಬೆಂಬಲಿಸುವಂತೆ ಪಟ್ಟಣದ ಕನಕನಗರದಲ್ಲಿ ಗುರುವಾರ ರಾತ್ರಿ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಡಿ.ರವಿಶಂಕರ್ ಅವರಿಗೆ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಮನವಿ ಸಲ್ಲಿಸಿ ಮಾತನಾಡಿದ ಅವರು, ಒಳ ಮೀಸಲಾತಿಗಾಗಿ ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಸರ್ಕಾರಗಳು ನ್ಯಾಯ ಒದಗಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಈ ಹಿಂದೆ ತಮ್ಮದೇ ಸರ್ಕಾರ ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಈ ಒಳಮೀಸಲಾತಿ ವರದಿಯನ್ನು ಸದನದಲ್ಲಿ ಚರ್ಚಿಸಿ ಯಥವತ್ತಾಗಿ ಜಾರಿಗೊಳಿಸುವಂತೆ ಒತ್ತಾಯಿಸಬೇಕು ಎಂದು ಶಾಸಕರಲ್ಲಿ ಮನವಿ ಮಾಡಿದರು.

ಶಾಸಕ ಡಿ.ರವಿಶಂಕರ್ ಮಾತನಾಡಿ, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿ, ಬೆಳಗಾವಿಯಲ್ಲಿ ನಡೆಯಲಿವ ಚಳಿಗಾಲದ ಅಧಿವೇಶನದಲ್ಲಿ ಜಾರಿ ಮಾಡುವಂತೆ ಮನವಿ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಪುರಸಭಾ ಸದಸ್ಯ ನಟರಾಜು, ಗ್ರಾಮ ಪಂಚಾಯಿತಿ ಸದಸ್ಯ ಮಾರಗೌಡನಹಳ್ಳಿರಾಜೇಶ್, ತಾಲೂಕು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಎಂ.ಎಸ್.ಮಲ್ಲೇಶ್, ಮಾದಿಗ ದಂಡೋರ ತಾಲೂಕು ಅಧ್ಯಕ್ಷ ಎಂ.ಎಸ್.ನಂಜುಂಡಸ್ವಾಮಿ, ತಾಲೂಕು ಮಾದಿಗ ಸಂಘರ್ಷ ಸಮಿತಿ ಅಧ್ಯಕ್ಷ ಮಧುವನಹಳ್ಳಿರವಿಕುಮಾರ್, ಮುಖಂಡರಾದ ಕಚಿಪಿಚಿ ವೆಂಕಟೇಶ್, ಜುಟ್ಟುಮಹದೇವ್, ರವಿಪೂಜಾರಿ, ಮಧುವನಹಳ್ಳಿನಾಗೇಂದ್ರ, ಪ್ರದೀಪ್, ಕುಮಾರ್, ಸುರೇಶ್, ಕೆಂಚವಿನೋಧ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net