ಮಕ್ಕಳ ಶೈಕ್ಷಣಿಕ ಪ್ರಗತಿಯತ್ತ ಶಿಕ್ಷಕರು ಗಮನಹರಿಸಲಿ

04BTP01
ಹಾರನಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗದಲ್ಲಿ ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ ಶಿಕ್ಷಕರು ಭಾಗವಹಿಸಿದ್ದರು.
Published on

ಬೆಟ್ಟದಪುರ: ಮಕ್ಕಳ ಶೈಕ್ಷಣಿಕ ಪ್ರಗತಿಯತ್ತ ಶಿಕ್ಷಕರು ಹೆಚ್ಚಿನ ಗಮನಹರಿಸಬೇಕು ಎಂದು ಶಿಕ್ಷಣ ಇಲಾಖೆಯ ಪಿರಿಯಾಪಟ್ಟಣ ಇಸಿಒ ಕೆ.ಎಂ.ಸ್ವಾಮಿ ಹೇಳಿದರು.

ಸಮೀಪದ ಹಾರನಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗದಲ್ಲಿ ಶನಿವಾರ ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಕರು ಮಕ್ಕಳಿಗೆ ಶೈಕ್ಷಣಿಕ ತರಬೇತಿಯೊಂದಿಗೆ ಪ್ರಚಲಿತ ಘಟನೆಗಳ ಬಗ್ಗೆಯೂ ವಿಶೇಷವಾಗಿ ತಿಳಿಸಬೇಕು. ನಲಿಕಲಿ ತರಬೇತಿಯಲ್ಲಿನ ಅಂಶಗಳಂತೆ ತರಗತಿ ನಡೆಸಬೇಕು. ಇದಲ್ಲದೆ ಮಕ್ಕಳಿಗೆ ಶಿಕ್ಷಣದೊಂದಿಗೆ ಇತರ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ಅವರನ್ನು ಪ್ರೇರೇಪಿಸಬೇಕು ಎಂದರು.

ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ಮಲ್ಲಿಕಾರ್ಜುನ, ಹನುಮಂತ, ಚಂದ್ರಶೇಖರ, ಕೀರ್ತಿಕುಮಾರ್, ಶಾಲೆ ಮುಖ್ಯಶಿಕ್ಷಕ ಕೆ.ಸಿ.ಸತೀಶ್ ಸೇರಿದಂತೆ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಚಪ್ಪರದಹಳ್ಳಿ, ಕಣಗಾಲ್, ಬೆಟ್ಟದಪುರ, ಚಿಕ್ಕನೇರಳೆ ಕ್ಲಸ್ಟರ್ ವ್ಯಾಪ್ತಿಯ ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net