ತಿರುಪತಿ ಲಡ್ಡು ವಿಚಾರ ತನಿಖೆಯಾಗಲಿ: ಎಂ ಬಿ ಪಾಟೀಲ

MB PATIL
Published on

ಬೆಂಗಳೂರು: ತಿರುಪತಿ ಲಡ್ಡುಗೆ ಪ್ರಾಣಿ ಜನ್ಯ ಕೊಬ್ಬು ಸೇರಿಸಿದ್ದಾರೆ ಎಂಬ ಆರೋಪ ಕುರಿತು ತಪ್ಪಿತಸ್ಥರಿಗೆ ಶಿಕ್ಷೆ ಕೊಡಬೇಕು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಮಾಧ್ಯಮಗಳ ಜತೆ ಮಾತನಾಡಿದ ಅವರು, ಲಡ್ಡುಗೆ ಪ್ರಾಣಿಜನ್ಯ ಕೊಬ್ಬು ಸೇರಿಸಿರುವ ವಿಚಾರ ಕೇಳಿಬಂದಿದೆ. ಇದು ನಿಜವೇ ಆಗಿದ್ದಲ್ಲಿ ತುಂಬ ಆಘಾತಕಾರಿ. ಆದ್ದರಿಂದ ಈ ಬಗ್ಗೆ ತನಿಖೆ ನಡೆದು, ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಬೇಕು ಎಂದರು.

ಮೊದಲೆಲ್ಲ ಕೆಎಂಎ್ ತಿರುಪತಿಗೆ ತುಪ್ಪ ಪೂರೈಸುತ್ತಿತ್ತು. ಆಗ ಕಲಬೆರಕೆ ಇತ್ಯಾದಿ ಏನೂ ಇರಲಿಲ್ಲ. ಈ ಬಗ್ಗೆ ನಾನು ಕೆಎಂಎ್ ಅಧ್ಯಕ್ಷರ ಜತೆ ಕೂಡ ಮಾತನಾಡಿದ್ದೇನೆ. ಯಾರೇ ಆದರೂ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಬಾರದು ಎಂದು ತಿಳಿಸಿದರು.

ಹನಿಟ್ರ್ಯಾಪ್ ತಂತ್ರ ಆಘಾತಕಾರಿ

ಬಿಜೆಪಿ ಶಾಸಕ ಮುನಿರತ್ನ ಅವರು ಎಚ್‌ಐವಿ ಸೋಂಕಿತ ಮಹಿಳೆಯರನ್ನು ಬಳಸಿಕೊಂಡು ತಮ್ಮ ವಿರೋಧಿಗಳನ್ನು ಹನಿಟ್ರ್ಯಾಪ್ ಮಾಡುತ್ತಿದ್ದರು ಎನ್ನುವ ಸಂಗತಿ ಕೇಳಿಬಂದಿದೆ. ಇದರ ಸತ್ಯಾಸತ್ಯತೆ ನನಗೆ ಗೊತ್ತಿಲ್ಲ. ಇದು ನಿಜವೇ ಆಗಿದ್ದರೆ ಇದೊಂದು ತಲೆ ತಗ್ಗಿಸಬೇಕಾದ ಆಘಾತಕಾರಿ ವಿದ್ಯಮಾನ. ಇದರ ಬಗ್ಗೆಯೂ ತನಿಖೆ ನಡೆದು ಸತ್ಯಾಂಶ ಹೊರಬರಲಿ ಎಂದು ಎಂ.ಬಿ.ಪಾಟೀಲ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net