ಅಹಿತಕರ ಘಟನೆಗಳಿಗೆ ಅವಕಾಶವಾಗದಿರಲಿ

30-npk-1
ನಾಪೋಕ್ಲು ಪೊಲೀಸ್‌ಠಾಣೆಯಲ್ಲಿ ನಡೆಸ ಸಭೆಯಲ್ಲಿ ಪಿ.ಜಿ.ರಾಘವೇಂದ್ರ ಮಾತನಾಡಿದರು.
Published on

ನಾಪೋಕ್ಲು: ಗೌರಿ-ಗಣೇಶೋತ್ಸವವನ್ನು ನಾಪೋಕ್ಲು ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸೌಹಾರ್ದತೆಯಿಂದ ಆಚರಿಸಿ ಎಂದು ನಾಪೋಕ್ಲು ಪೊಲೀಸ್ ಠಾಣೆ ಪಿಎಸ್‌ಐ ಪಿ.ಜಿ.ರಾಘವೇಂದ್ರ ತಿಳಿಸಿದರು.

ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲ ಗೌರಿ ಗಣೇಶೋತ್ಸವ ಸಮಿತಿಗಳ ಸದಸ್ಯರ ಸಭೆಯಲ್ಲಿ ಮಾತನಾಡಿದರು. ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದು, ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಕಾವಲುಗಾರನಾಗಿ ಒಬ್ಬರನ್ನು ನೇಮಿಸಿಕೊಂಡು ರಾತ್ರಿಯಲ್ಲಿ ತಂಗಲು ವ್ಯವಸ್ಥೆ ಮಾಡಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ಕೆಇಬಿ, ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದುಕೊಳ್ಳುವುದು ಅಗತ್ಯ ಎಂದರು.

ಅತಿಯಾದ ಧ್ವನಿವರ್ಧಕ ಬಳಸಿ ಶಬ್ದ ಮಾಲಿನ್ಯ ಮಾಡದಂತೆ ನೋಡಿಕೊಳ್ಳಬೇಕು, ಗಣೇಶ ವಿಸರ್ಜನೆ ಮೆರವಣಿಗೆ ಸಮಯ ರಾತ್ರಿ 10 ಗಂಟೆ ಒಳಗಡೆ ಮುಗಿಸಬೇಕು, ಈಜುಗಾರರು ವಿಸರ್ಜನಾ ಸ್ಥಳದಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು. ಈ ಸಂದರ್ಭ ವಿವಿಧ ಗೌರಿ ಗಣೇಶೋತ್ಸವ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net