ಅಹಿಂಸೆ, ಸನ್ಮಾರ್ಗದಲ್ಲಿ ನಡೆಯೋಣ

bdvt (10)
ಭದ್ರಾವತಿಯಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಶಾಸಕ ಬಿ.ಕೆ.ಸಂಗಮೇಶ್ವರ್ ಉದ್ಘಾಟಿಸಿದರು. ಬೌದ್ಧ ಭಿಕ್ಷು ನ್ಯಾನಲೋಕ ಬಂತೇಜಿ, ಗೀತಾ ರಾಜ್ಕುಮಾರ್, ಪರುಸಪ್ಪ ಇತರರಿದ್ದರು.
Published on

ಭದ್ರಾವತಿ: ಅಂಬೇಡ್ಕರ್ ಅವರು ಗೌತಮ ಬುದ್ಧನ ಪಂಚಶೀಲ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬಾಳಿದವರು ಎಂದು ಬೌದ್ಧ ಭಿಕ್ಷು ನ್ಯಾನಲೋಕ ಬಂತೇಜಿ ಹೇಳಿದರು.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸೋಮವಾರ ಕನಕ ಮಂಟಪ ಮೈದಾನದಲ್ಲಿ ಏರ್ಪಡಿಸಿದ್ದ ಡಾ. ಅಂಬೇಡ್ಕರ್ ಹಾಗೂ ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಸತ್ಯ, ಅಹಿಂಸೆ, ಸನ್ಮಾರ್ಗದಲ್ಲಿ ನಡೆದರೆ ಅದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದರು.

ನಗರಸಭೆ ಸದಸ್ಯ ಬಿ.ಕೆ.ಮೋಹನ್ ಮಾತನಾಡಿ, ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ಸಿಕ್ಕ ಸೌಲಭ್ಯ ಪಡೆಯುವುದರ ಜತೆಗೆ ಅವರ ಜಯಂತಿ ಕಾರ್ಯಕ್ರಮದಲ್ಲಿ ಫಲಾನುಭವಿಗಳು ಭಾಗವಹಿಸಬೇಕು ಎಂದು ತಿಳಿಸಿದರು.

ಶಾಸಕ ಬಿ.ಕೆ.ಸಂಗಮೇಶ್ವರ್ ಮಹನೀಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಡಾ. ಬಾಬು ಜಗಜೀವನರಾಂ ಕುರಿತು ಮುರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯ ನಾಗರಾಜ್ ಉಪನ್ಯಾಸ ನೀಡಿದರು. ವಿಶೇಷ ಸಾಧನೆಗೈದ ವಿದ್ಯಾರ್ಥಿಗಳು ಮತ್ತು ಸಾಧಕರನ್ನು ಗೌರವಿಸಲಾಯಿತು. ಅಂಗನವಾಡಿ ಕೇಂದ್ರಗಳಿಗೆ ಟಿವಿ ವಿತರಿಸಲಾಯಿತು.

ನಗರಸಭೆ ಅಧ್ಯಕ್ಷೆ ಗೀತಾ ರಾಜ್ಕುಮಾರ್, ತಹಸೀಲ್ದಾರ್ ಪರುಸಪ್ಪ, ತಾಪಂ ಇಒ ಗಂಗಣ್ಣ, ನಗರಸಭೆ ಆಯುಕ್ತ ಪ್ರಕಾಶ್ ಚೆನ್ನಣ್ಣವರ್, ಡಿವೈಎಸ್ಪಿ ನಾಗರಾಜ್, ಬಿಇಒ ನಾಗೇಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸುರೇಶ್, ಮಾಣಿ ಶೇಖರ್, ಸವಿತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net