ಪರ್ಯಾಯ ನಿವೇಶನ ವ್ಯವಸ್ಥೆ ಕಲ್ಪಿಸಲಿ

24RAM1
Published on

ರಾಮದುರ್ಗ: ತಾಲೂಕಿನ ಕಲಹಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದ ಜಾಗದಲ್ಲಿ ಅಕ್ರಮ ಶೆಡ್‌ಗಳಲ್ಲಿ ವಾಸವಿರುವ ದಲಿತ ಕುಟುಂಬಗಳಿಗೆ ಪರ್ಯಾಯ ನಿವೇಶನದ ವ್ಯವಸ್ಥೆ ಕಲ್ಪಿಸಿ, ಶಾಲಾ ಮಕ್ಕಳಿಗೆ ಆಗುತ್ತಿರುವ ಅಡಚಣೆ ತಪ್ಪಿಸುವಂತೆ ಒತ್ತಾಯಿಸಿ ಎಸ್‌ಡಿಎಂಸಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಸಿಇಒ ರಾಹುಲ ಶಿಂಧೆಗೆ ಗುರುವಾರ ಮನವಿ ಸಲ್ಲಿಸಿದರು.

ಶಾಲೆ ವಿದ್ಯಾರ್ಥಿಗಳ ಅಭ್ಯಾಸ ಮತ್ತು ಕ್ರೀಡಾ ಚಟುವಟಿಕೆಗೆಗೆ ಅಡಚಣೆ ಆಗುತ್ತಿದೆ. ವಸತಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದರೆ ಬೇರೆಡೆಗೆ ಹೋಗುತ್ತೇವೆ ಎಂದು ದಲಿತ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ರಾಮದುರ್ಗ ತಹಸೀಲ್ದಾರ್‌ರಿಂದ ಸಮಗ್ರ ಮಾಹಿತಿ ತರಿಸಿಕೊಂಡು ದಲಿತ ಕುಟುಂಬಗಳಿಗೆ ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದಾರೆ.

ಮುಖಂಡರಾದ ಹನಮಪ್ಪ ಮಡಿವಾಳರ, ಎಸ್‌ಡಿಎಂಸಿ ಉಪಾಧ್ಯಕ್ಷ ಹನುಮಂತಗೌಡ ಪಾಟೀಲ, ಕಲ್ಲಪ್ಪ ಜಗ್ಗಲ, ನಾರಾಯಣ ಹೂಲಗೇರಿ, ಶಂಕರಗೌಡ ಪಾಟೀಲ, ಶಿವನಗೌಡ ಪಾಟೀಲ, ಬಸವರಾಜ ಗುಡ್ಡದ, ಹನುಮಂತ ಮಾದರ, ಶ್ರೀಶೈಲ ಮರಿಬಾಶೆಟ್ಟಿ, ನಾಗಪ್ಪ ಕಪಲಿ, ಶಿವಪ್ಪ ಕಂಬಳಿ, ನಿವೃತ್ತ ಮುಖ್ಯಶಿಕ್ಷಕ ಜಿ.ಐ. ಹಕಾಟಿ, ವೆಂಕಪ್ಪ ಡೊಂಬರಳ್ಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net