ಕ್ರಸ್ಟ್ ಗೇಟ್ ದುರಸ್ತಿಗೆ ತ್ವರಿತ ಕ್ರಮಕೈಗೊಳ್ಳಲಿ

GTD
Published on


ಮೈಸೂರು:
ಚಾಮುಂಡಿ ಬೆಟ್ಟದ ದೇವಾಲಯವನ್ನು ರಾಜ್ಯ ಸರ್ಕಾರ ನಿರ್ವಹಣೆ ಮಾಡುತ್ತಿದೆ. ಆದರೆ ಅದು ಮಹಾರಾಜರಿಗೆ ಸೇರಿದ್ದು. ಚಾಮುಂಡಿ ಬೆಟ್ಟದ ಪ್ರಾಧಿಕಾರವನ್ನು ರಾಜ್ಯ ಸರ್ಕಾರ ಯಾವ ರೀತಿ ಮಾಡಿದೆ ಎಂಬುದನ್ನು ನೋಡಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಂಗಾಭದ್ರಾ ಜಲಾಶಯ ಕ್ರಸ್ಟ್ ಗೇಟ್ ದುರಸ್ತಿಗೆ ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು. ಈಗಾಗಲೇ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹೊರಹೋಗಿದೆ. ಕೂಡಲೇ ವಿದೇಶಿ ತಜ್ಞರನ್ನು ಕರೆಸಿ ದುರಸ್ತಿ ಮಾಡಿಸಬೇಕು. ವಿದೇಶಿ ತಜ್ಞರು ನೀರಿನೊಳಗಿನಿಂದ ರಿಪೇರಿ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಜತೆಗೆ ರಾಜ್ಯದ ಎಲ್ಲ ಜಲಾಶಯಗಳ ಸಮರ್ಪಕ ನಿರ್ವಹಣೆಗೆ ಸರ್ಕಾರ ಸೂಕ್ತ ಕ್ರಮ ವಹಿಸಬೇಕು ಎಂದು ಹೇಳಿದರು.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಅಭ್ಯರ್ಥಿ ಯಾರೆಂಬುದೂ ಇನ್ನೂ ನಿರ್ಧಾರವಾಗಿಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net