

ಸರಗೂರು: ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜೆಎಸ್‌ಎಸ್ ಶಾಲೆಯ ಮುಖ್ಯ ಶಿಕ್ಷಕ ಮೊಹಮ್ಮದ್ ಅಂಜುಮ್ ಪಾಷ ತಿಳಿಸಿದರು.
ತಾಲೂಕಿನ ಪಟ್ಟಣದ ಪ್ರಗತಿ ವಿದ್ಯಾಸಂಸ್ಥೆಯ ಆವರಣದಲ್ಲಿ ಶುಕ್ರವಾರ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕನ್ನಡಿಗರಾದ ನಾವು ನುಡಿ ಕನ್ನಡ, ನಡೆ ಕನ್ನಡ, ಉಸಿರು ಕನ್ನಡ ಎಂದು ಜೀವಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ರಾಜ್ಯ ಮಾತ್ರವಲ್ಲದೇ ವಿದೇಶಗಳಲ್ಲೂ ಸಹ ಕನ್ನಡಿಗರು ಕನ್ನಡ ಹಬ್ಬ ಆಚರಿಸುವುದು, ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಸ್ಮರಿಸುವುದು ಸಾಮಾನ್ಯ. ಇದೊಂದು ಸಡಗರದ ಹಬ್ಬ. ನಾಮಫಲಕಗಳಲ್ಲಿ ಶೇ.50 ಕ್ಕಿಂತ ಹೆಚ್ಚು ಕನ್ನಡ ಬಳಸಬೇಕು ಎಂದು ತಿಳಿಸಿದರು.
ಆದಿಕರ್ನಾಟಕ ಮಹಾಸಭಾ ತಾಲೂಕು ಅಧ್ಯಕ್ಷ ಸರಗೂರು ಶಿವಣ್ಣ ಮಾತನಾಡಿದರು. ಪ್ರಗತಿ ವಿದ್ಯಾಸಂಸ್ಥೆಯ ಸಮಿತಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಶಾಲೆಯ ಸಲಹೆಗಾರ ನಾಗಣ್ಣ, ಶಾಲೆಯ ಮುಖ್ಯ ಶಿಕ್ಷಕ ಸತೀಶ್, ಶಿಕ್ಷಕರು ಪಾಲಕಕರು ಭಾಗವಹಿಸಿದ್ದರು.