ಬಂಜಾರ ಸಮಾಜದಿಂದ ಪತ್ರ ಚಳವಳಿ

banjara
ಒಳಮೀಸಲಾತಿ ವರ್ಗೀಕರಣ ಅವೈಜ್ಞಾನಿಕವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ ಬಂಜಾರ ಸಂಘದ ನೇತೃತ್ವದಲ್ಲಿ ಪ್ರತಿಭಟನಾಕಾರರು ಪತ್ರ ಚಳವಳಿ ನಡೆಸಿದರು. ಸೈನಾ ಭಗತ್ ಮಹಾರಾಜ್, ಗಿರೀಶ್ ನಾಯ್ಕ, ಆನಂದ್ ನಾಯ್ಕ ಇತರರಿದ್ದರು.
Published on

ಶಿವಮೊಗ್ಗ: ಒಳಮೀಸಲಾತಿ ವರ್ಗೀಕರಣ ಅವೈಜ್ಞಾನಿಕವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ ಬಂಜಾರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ 7ನೇ ದಿನಕ್ಕೆ ಕಾಲಿಟ್ಟಿದೆ. ಬುಧವಾರ ಧರಣಿ ನಿರತರು ಬಾಲರಾಜ ಅರಸ್ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಬಳಿಕ ಮುಖ್ಯ ಅಂಚೆ ಕಚೇರಿ ಎದುರು ಪತ್ರ ಚಳವಳಿ ಮಾಡಿದರು.

ಪ್ರತಿಭಟನಾಕಾರರು ಪತ್ರ ಚಳವಳಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಳಮೀಸಲಾತಿ ವರ್ಗೀಕರಣ ವಿರೋಧಿಸಿ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿದರು. ಪೋಸ್ಟ್ ಕಾರ್ಡಅನ್ನು ಕೈಯಲ್ಲಿ ಹಿಡಿದುಕೊಂಡು ಅಂಚೆ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ, ಬಂಜಾರ ಸಮಾಜದ ಗುರುಗಳಾದ ಸೈನಾ ಭಗತ್ ಮಹಾರಾಜ್, ಕೆ.ಜೆ.ನಾಗೇಶ್ ನಾಯ್ಕ, ಬಸವರಾಜ್ ನಾಯ್ಕ, ನಾನ್ಯಾನಾಯ್ಕಾ, ಜಗದೀಶ್ ನಾಯ್ಕ, ನಾಗರಾಜ್ ನಾಯ್ಕ, ಭದ್ರಾವತಿ ಹಾಗೂ ಶಿವಮೊಗ್ಗ ತಾಲೂಕಿನ 10ಕ್ಕೂ ಅಧಿಕ ತಾಂಡಾಗಳ ಪ್ರಮುಖರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net