

ತಮಿಳುನಾಡು: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ನಿರ್ಮಾಣದಲ್ಲಿ ಬಿಡುಗಡೆಗೆ ಸಜ್ಜಾಗಿರುವ 'ಲೆಟ್ಸ್ ಗೆಟ್ ಮ್ಯಾರೀಡ್' ಚಿತ್ರವು ಇದೀಗ ಟಾಲಿವುಡ್ ಚಿತ್ರರಂಗದ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ 'ಬ್ರೋ' ಚಿತ್ರದೊಂದಿಗೆ ಬಾಕ್ಸ್ ಆಫೀಸ್ನಲ್ಲಿ ಪೈಪೋಟಿ ನೀಡಲು ತಯಾರಾಗಿದೆ.
ಧೋನಿ ಎಂಟರ್ಟೈನ್ಮೆಂಟ್ಸ್ ಅವರ ನಿರ್ಮಾಣದಲ್ಲಿ ತಯಾರಾಗಿರುವ ಚೊಚ್ಚಲ ಸಿನಿಮಾ 'ಲೆಟ್ಸ್ ಗೆಟ್ ಮ್ಯಾರೀಡ್' ಚಿತ್ರದಲ್ಲಿ ಹರೀಶ್ ಕಲ್ಯಾಣ್ ಮತ್ತು ಇವಾನಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಈ ಸಿನಿಮಾ ಇದೇ ಜುಲೈ 28, 2023 ರಂದು ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.
ಈ ಮಧ್ಯೆ ಕಾಮಿಡಿ, ಡ್ರಾಮಾ ಜಾನರ್ನಲ್ಲಿ ಮೂಡಿಬಂದಿರುವ ಪವನ್ ಕಲ್ಯಾಣ್ ನಟನೆಯ 'ಬ್ರೋ' ಚಿತ್ರ, ದೋನಿ ನಿರ್ಮಾಣದ 'ಎಲ್ಜಿಎಂ' ಸಿನಿಮಾ ರಿಲೀಸ್ ಆಗುವ ದಿನವೇ ಬಿಡುಗಡೆಗೊಳ್ಳುವ ಮೂಲಕ ಇದೀಗ ಬಾಕ್ಸ್ ಆಫೀಸ್ನಲ್ಲಿ ಭಾರೀ ಪೈಪೋಟಿ ಕೊಡಲು ಸಜ್ಜಾಗಿದೆ ಎಂದು ಇತ್ತೀಚಿನ ಫಿಲಂ ವರದಿ ಮಾಹಿತಿ ನೀಡಿದೆ,(ಏಜೆನ್ಸೀಸ್).