ಗಣಪತಿ ವಿಸರ್ಜನೆ ನಿಮಿತ್ತ ನಾಳೆ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶ

ಕಲಬುರಗಿ ಜಿಲ್ಲೆಯಾದ್ಯಂತ ಗಣೇಶ ಚತುರ್ಥಿ ನಿಮಿತ್ಯ ಪ್ರತಿಷ್ಠಾಪಿಸಲಾಗಿರುವ 21 ದಿನಗಳ ಅವಧಿಯ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅಕ್ಟೋಬರ್ 9ರ ಬೆಳಿಗ್ಗೆ 6 ಗಂಟೆಯಿಂದ ಅ.10ರ‌ ಬೆಳಿಗ್ಗೆ 6 ಗಂಟೆ ವರೆಗೆ 1965ರ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರಂತೆ ಕಲಬುರಗಿ ನಗರ, ಆಳಂದ ಹಾಗೂ ಜೇವರ್ಗಿ ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಢಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.
IMG-20230928-WA0051
Published on

ಕಲಬುರಗಿ,: ‌ಕಲಬುರಗಿ ಜಿಲ್ಲೆಯಾದ್ಯಂತ ಗಣೇಶ ಚತುರ್ಥಿ ನಿಮಿತ್ಯ ಪ್ರತಿಷ್ಠಾಪಿಸಲಾಗಿರುವ 21 ದಿನಗಳ ಅವಧಿಯ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅಕ್ಟೋಬರ್ 9ರ ಬೆಳಿಗ್ಗೆ 6 ಗಂಟೆಯಿಂದ ಅ.10ರ‌ ಬೆಳಿಗ್ಗೆ 6 ಗಂಟೆ ವರೆಗೆ 1965ರ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರಂತೆ ಕಲಬುರಗಿ ನಗರ, ಆಳಂದ ಹಾಗೂ ಜೇವರ್ಗಿ ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಢಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ಕಲಬುರಗಿ ನಗರ, ಆಳಂದ ಹಾಗೂ ಜೇವರ್ಗಿ ತಾಲೂಕಿನಾದ್ಯಂತ ಎಲ್ಲಾ ತರಹದ ಮದ್ಯಪಾನ, ಸರಾಯಿ, ಶೇಂಧಿ, ಸ್ವದೇಶಿ ಹಾಗೂ ವಿದೇಶಿ ಮಧ್ಯಪಾನ ಮತ್ತು ಮಾದಕ ವಸ್ತುಗಳ ಮಾರಾಟ, ಸಾಗಾಟ ಹಾಗೂ ಮಧ್ಯಪಾಪವನ್ನು ನಿಷೇಧಿಸಿದಲ್ಲದೆ ಬಾರ್ ಹಾಗೂ ರೆಸ್ಟೋರೆಂಟ್ ಅಂಗಡಿಗಳನ್ನು ಮುಚ್ಚುವಂತೆ ಸಹ ಆದೇಶಿಸಲಾಗಿದೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net