ಪಿಕ್ನಿಕ್​​ಗೆ ತೆರಳಿದ್ದ ವೇಳೆಯೇ ಸಿಡಿಲು ಬಡಿದು 6 ಜನರ ಸಾವು, ಒಂದೇ ದಿನದಲ್ಲಿ 11 ಮಂದಿ ಬಲಿ!

Lightning
Published on

ಭೋಪಾಲ್​: ಭಾರೀ ಮಳೆಯಿಂದಾಗಿ ಸಿಡಿಲು ಬಡಿದು ಒಂದೇ ದಿನದಲ್ಲಿ 11 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಂಗಾಲಾಗಿರುವ ಮಧ್ಯಪ್ರದೇಶದ ಮೂರು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲದೇ ಸಿಡಲಿ ಬಡಿದು ಒಂದೇ ದಿನ 11 ಮಂದಿ ಪ್ರಾಣಕಳೆದುಕೊಂಡಿದ್ದು, ಈವರೆಗೆ 45 ಮಂದಿ ಮೃತಪಟ್ಟಿರುವುದು ವರದಿಯಾಗಿದೆ.

ಇಲ್ಲಿನ ಅಜ್ನೋಯಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಪಿಕ್ನಿಕ್​ಗೆ ತೆರಳಿದ್ದ ಆರು ಮಂದಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿರುವ ಘಟನೆಯೂ ನಡೆದಿದ್ದು, ಕೆಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಮಧ್ಯೆ ಇನ್ನೂ ಭಾರೀ ಮಳೆಯಾಗಲಿದ್ದು, ಸಿಡಿಲಿಗೆ ಮತ್ತಷ್ಟು ಸಾವು-ನೋವು ಸಂಭವಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net