ಮೇ 3ರ ನಂತರ ಮದ್ಯ ಸೇಲ್?

page 6 4
Published on

ಬೆಂಗಳೂರು: ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಒತ್ತಡ ಇರುವ ಹಿನ್ನೆಲೆಯಲ್ಲಿ ಮೇ 3 ರ ನಂತರ ಅನುಮತಿ ನೀಡುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ. ಕೆಂಪು ವಲಯ ಹೊರತುಪಡಿಸಿ ಉಳಿದೆಡೆ ಮದ್ಯ ಮಾರಾಟ ಆರಂಭಕ್ಕೆ ನಿರ್ಧರಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಮದ್ಯದಂಗಡಿ, ಎಂಎಸ್​ಐಎಲ್​ನಲ್ಲಿ ಪಾರ್ಸೆಲ್​ಗೆ ಅವಕಾಶ ನೀಡಲಾಗುತ್ತದೆ, ಅಲ್ಲಿಯೇ ಕುಡಿಯಲು ಅವಕಾಶ ಇರುವುದಿಲ್ಲ ಎನ್ನಲಾಗಿದೆ. ಮದ್ಯ ಮಾರಾಟ ಪ್ರಾರಂಭಿಸುವಂತೆ ಲಾಬಿ, ಸಂಪನ್ಮೂಲ ಕ್ರೋಡೀಕರಣದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಸಬ್ ರಿಜಿಸ್ಟ್ರಾರ್ ಕಚೇರಿ: ಇತರ ಜಿಲ್ಲೆಗಳಲ್ಲಿ ಕಾರ್ಯ ಆರಂಭಿಸಿರುವ ಸಬ್ ರಿಜಿಸ್ಟ್ರಾರ್ ಕಚೇರಿಗಳು ಬೆಂಗಳೂರಿನಲ್ಲಿ ಬುಧವಾರ ಆರಂಭವಾಗಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net