ಮದ್ಯ ಪ್ರಿಯರಿಗೆ ಶಾಕಿಂಗ್​ ನ್ಯೂಸ್​! ಏ.14ರವರೆಗೆ ಮದ್ಯದ ಅಂಗಡಿಗಳು ತೆರೆಯುವುದಿಲ್ಲ

liquor
Published on

ಬೆಂಗಳೂರು: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಮತ್ತೊಂದು ಆಘಾತಕಾರಿ ಸುದ್ದಿ ನೀಡಿದೆ. ರಾಜ್ಯದಲ್ಲಿ ಕರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಏ.14ರವರೆಗೆ ರಾಜ್ಯದಲ್ಲಿ ಎಲ್ಲ ರೀತಿಯ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶ ಉಲ್ಲಂಘಿಸಿ ಮದ್ಯದ ಅಂಗಡಿಗಳು ತೆರೆದಿದ್ದರೆ ಅದಕ್ಕೆ ಅಬಕಾರಿ ಉಪ ಆಯುಕ್ತರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅಬಕಾರಿ ಆಯುಕ್ತರು ಆದೇಶದಲ್ಲಿ ಎಚ್ಚರಿಕೆ ನೀಡಿದ್ದಾರೆ.

ಅಬಕಾರಿ ಇಲಾಖೆ ಆಯುಕ್ತರು ಮಾ.21ರಂdu ಆದೇಶ ಹೊರಡಿಸಿ ಮಾ.31ರವರೆಗೆ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಿದ್ದರು. ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಏ.14ರವರೆಗೆ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಮತ್ತೆ ಸೂಚನೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net