

ಬೀದರ್: ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಎರಡು ಮೂರು ದಿನಗಳಲ್ಲಿ ಸಿದ್ಧವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಬೀದರ್‌ನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನವದೆಹಲಿಯಲ್ಲಿ ಇಂದು (ಮಾ.7) ರಂದು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಈ ವಿಷಯ ಚರ್ಚೆ ಅಂತಿಮ ಪಟ್ಟಿ ಸಿದ್ಧವಾಗಲಿದೆ ಎಂದು ಹೇಳಿದರು.
ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ರಾಜ್ಯದಲ್ಲಿ ದಲಿತ ಸಮುದಾಯದವರು ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತನ್ನು ಅವರು ಪುನರುಚ್ಚರಿಸಿದ್ದಾರೆ ಎಂದು ಸಮರ್ಥಿಸಿಕೊಂಡರು.
ಬೆಂಗಳೂರಿನ ಕುಂದಲಹಳ್ಳಿ ಬಳಿಯಿರುವ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಯ ಸುಳಿವು ದೊರೆತಿದೆ. ಎನ್ಐಎ ಹಾಗೂ ಸಿಸಿಬಿ ಎರಡೂ ತನಿಖಾ ಸಂಸ್ಥೆಗಳು ಆರೋಪಿಗಾಗಿ ಹುಡುಕಾಟ ಕೈಗೊಂಡಿವೆ ಎಂದರು.
ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ: ಬಾಕಿ ಇರುವ ಕಾಮಗಾರಿಗಳ ಬಿಲ್ಲುಗಳ ಪವತಿಗಾಗಿ 50 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿ ಗಳಿಗೆ ಒದಗಿಸಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ ಒದಗಿಸಲಾಗುವುದು ಎಂದರು.