ಜನರ ದೂರಿಗೆ ಗುರಿಯಾದ ಅಧಿಕಾರಿಗಳ ಪಟ್ಟಿ: ಡಿಸಿಗಳಿಗೆ ಸಚಿವರ ಸೂಚನೆ

Krishna Byregowda
Published on

ಬೆಂಗಳೂರು: ದೀರ್ಘಕಾಲದಿಂದ ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿರುವ ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ರಾಜ್ಯ ಸರ್ಕಾರದ ಕಣ್ಣು ಬಿದ್ದಿದೆ. ಒಂದೇ ಸ್ಥಳದಲ್ಲಿ ದೀರ್ಘಾವಧಿಯಿಂದ ಸೇವೆ ಸಲ್ಲಿಸುತ್ತಿರುವ ಕಂದಾಯ ಇಲಾಖೆ ಕೆಲವು ಅಧಿಕಾರಿಗಳ ವಿರುದ್ಧ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬರುತ್ತಿವೆ.

ಸಾರ್ವಜನಿಕರು ದೂರು ಸಲ್ಲಿಸಲು ಕಾರಣರಾದಂತಹ ಅಧಿಕಾರಿಗಳ ಪಟ್ಟಿಯನ್ನು ಶೀಘ್ರವೇ ಕಳುಹಿಸಬೇಕು ಎಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿ, ಕಂದಾಯ ಸಚಿವ ಕೃಷ್ಣಬೈರೇಗೌಡ ಪತ್ರ ಬರೆದಿದ್ದಾರೆ.

ಈ ಪತ್ರಕ್ಕೆ ಕಾರಣವೇನು?

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಎರಡು ದಿನಗಳ ಕಾಲ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಸಿಇಗಳು ಸಭೆ ಇತ್ತೀಚೆಗೆ ನಡೆಯಿತು. ಜನರ ಸಮಸ್ಯೆಗಳಿಗೆ ಸಕಾರಾತ್ಮಕ, ಗುಣಾತ್ಮಕವಾಗಿ ಇತ್ಯರ್ಥಪಡಿಸಲು, ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚಿಸಿದ್ದರು.

ಹಲವು ಅಧಿಕಾರಿಗಳು ಮತ್ತು ನೌಕರರು ಒಂದೇ ಕಚೇರಿ ಅಥವಾ ಒಂದೇ ಸ್ಥಳದಲ್ಲಿ ಅವಧಿ ಮೀರಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ, ಇಂತಹ ಹಲವು ಅಧಿಕಾರಿಗಳು/ ನೌಕರರ ವಿರುದ್ಧ ದೂರುಗಳು ಸಹ ಸ್ವೀಕೃತವಾಗಿವೆ ಎಂದು ಸಭೆಯಲ್ಲಿ ಗಮನಸೆಳೆದಿದ್ದರು.

ಈ ಹಿನ್ನೆಲೆಯಲ್ಲಿ ಅಂತಹ ಅಧಿಕಾರಿಗಳ ಪಟ್ಟಿ ರವಾನಿಸಲು ಡಿಸಿಗಳಿಗೆ ಪತ್ರ ಬರೆದ ಕೃಷ್ಣಬೈರೇಗೌಡ, ಆದ್ಯತೆಯ ಮೇಲೆ ಪರಿಗಣಿಸುವಂತೆಯೂ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net