ಸುಪ್ರಜ ಗುರುಕುಲ ಶಾಲೆಯಲ್ಲಿ ಅಕ್ಷರಾಭ್ಯಾಸ

14ss2aksarabhyasa student
ಸುಪ್ರಜ ಗುರುಕುಲ ಶಾಲೆಯಲ್ಲಿ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ ಸೇರಿದ ಮಕ್ಕಳಿಗೆ ಪಾಲಕ ಸಮ್ಮುಖದಲ್ಲಿ ಅಕ್ಷರಾಭ್ಯಾಸ ಮಾಡಿಸಲಾಯಿತು.
Published on

ಶನಿವಾರಸಂತೆ: ಇಲ್ಲಿನ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಿಕೆಜಿ, ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ ನಡೆಸಿ ಶುಕ್ರವಾರ ಮಕ್ಕಳನ್ನು ಸ್ವಾಗತಿಸಲಾಯಿತು.
ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲಕರ ಸಮ್ಮುಖದಲ್ಲಿ ಅರ್ಚಕ ಎಚ್.ಎನ್.ಸತ್ಯನಾರಾಯಣ ನೇತೃತ್ವದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು. ಇದಕ್ಕೂ ಮೊದಲು ಗಣೇಶ ಮತ್ತು ಶಾರದಾ ಪೂಜೆ ನೆರವೇರಿಸಲಾಯಿತು. ನಂತರ ವಿದ್ಯಾರ್ಥಿಗಳಿಗೆ ಬಾಳೆ ಎಲೆಯಲ್ಲಿ ಓಂಕಾರ ಹಾಗೂ ಶ್ರೀಕಾರವನ್ನು ಬರೆಸುವ ಮೂಲಕ ಸಾಂಪ್ರದಾಯಿಕವಾಗಿ ಅಕ್ಷರ ಕಲಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆ ಪ್ರಾಂಶುಪಾಲೆ ಡಿ.ಸುಜಲಾದೇವಿ, ಶಾಲೆಯ ಶಿಕ್ಷಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net