

ವಿರಾಜಪೇಟೆ: ಇಲ್ಲಿನ ತ್ರಿವೇಣಿ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
ಎರಡನೇ ತರಗತಿಯ ಶ್ರೀನಿತ್ ಛದ್ಮವೇಷ ಸ್ಪರ್ಧೆಯಲ್ಲಿ ದ್ವಿತೀಯ, ಮೂರನೇ ತರಗತಿಯ ಶಿಖಾ ಮುತ್ತಮ್ಮ ಕಥೆ ಹೇಳುವ ಸ್ಪರ್ಧೆಯಲ್ಲಿ ದ್ವಿತೀಯ ಮತ್ತು ಎರಡನೇ ತರಗತಿಯ ವಿ.ಆದ್ಯಾ ಭಕ್ತಿಗೀತೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಲಿಟಲ್ ಸ್ಕಾಲರ್ಸ್ ಅಕಾಡೆಮಿ ಮುಖ್ಯಸ್ಥೆ ಪೂಜಾ ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.