ಶಾಲಾ ಮಕ್ಕಳ ಬಿಸಿಯೂಟದಲ್ಲಿ ಹಲ್ಲಿ ಪತ್ತೆ; ಆಹಾರ ಸೇವಿಸಿದ್ದ ಮಕ್ಕಳು ಅಸ್ವಸ್ಥ

Lizard
ಸಾಂದರ್ಭಿಕ ಚಿತ್ರ
Published on

ರಾಯಚೂರು: ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟದಲ್ಲಿ ಹಲ್ಲಿ ಪತ್ತೆಯಾಗಿದ್ದು, ಆಹಾರ ಸೇವಿಸಿದ್ದ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಈ ಪ್ರಕರಣ ಸಂಭವಿಸಿದ್ದು, ಅಸ್ವಸ್ಥ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಯಚೂರು ಗ್ರಾಮೀಣ ತಾಲೂಕಿನ ಅಪ್ಪನದೊಡ್ಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಬಿಸಿಯೂಟದಲ್ಲಿ ಹಲ್ಲಿ ಪತ್ತೆಯಾಗಿದೆ. ಬಿಸಿಯೂಟದ ಸೇವಿಸಿದ ಮೂವರು ಅಸ್ವಸ್ಥಗೊಂಡಿದ್ದು, ಅವರನ್ನು ಯಾಪಲದಿನ್ನಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯಾಹ್ನ ಬಿಸಿಯೂಟಕ್ಕೆ ಸಿಬ್ಬಂದಿ ಉಪ್ಪಿಟ್ಟು ನೀಡಿದ್ದು, ಅಡುಗೆ ಪಾತ್ರೆಯ ತಳದಲ್ಲಿ ಹಲ್ಲೆ ಪತ್ತೆಯಾಗಿತ್ತು. ಸ್ಥಳಕ್ಕೆ ಯಾಪಲದಿನ್ನಿ ಪೊಲೀಸರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು, ಶಾಲೆಯ ಆವರಣದಲ್ಲಿ ವೈದ್ಯರು ಮೊಕ್ಕಾಂ ಹೂಡಿದ್ದಾರೆ. ಶಾಲೆಯ ಆವರಣದಲ್ಲಿ ಪಾಲಕರು ಜಮಾಯಿಸಿದ್ದು, ಇಬ್ಬರು ಅಡುಗೆ ಸಿಬ್ಬಂದಿ ವಿರುದ್ಧ ನಿರ್ಲಕ್ಷ್ಯ ಆರೋಪ ಕೇಳಿ ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net