ಸಿಎಂ ಅಪರ ಮುಖ್ಯ ಕಾರ್ಯದರ್ಶಿಯಾಗಿ‌ ಎಲ್.ಕೆ ಅತೀಕ್ ನಿಯೋಜನೆ

imresizer-1701067589757
Published on


ಬೆಂಗಳೂರು: ಮುಖ್ಯ ಕಾರ್ಯದರ್ಶಿ ಹುದ್ದೆಗೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌ ನೇಮಕಗೊಂಡಿರುವ ಹಿನ್ನೆಲೆಯಲ್ಲಿ, ಅವರಿಂದ ತೆರವಾಗುವ ಹುದ್ದೆಗೆ ಎಲ್‌.ಕೆ. ಅತೀಕ್‌ ಅವರನ್ನು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ನಿಯೋಜನೆ ಮಾಡಲಾಗಿದೆ.

ಹಣಕಾಸು ಇಲಾಖೆಯ ಹೆಚ್ಚುವರಿ ಪ್ರಭಾರವನ್ನೂ ಅತೀಕ್ ಅವರಿಗೆ ವಹಿಸಿ ಆದೇಶಿಸಲಾಗಿದೆ. ಸಿದ್ದರಾಮಯ್ಯ ಅವರ ಈ ಹಿಂದಿನ‌ ಸಿಎಂ ಅವಧಿಯಲ್ಲಿ ಅತೀಕ್ ಮುಖ್ಯಮಂತ್ರಿ‌ ಪ್ರಧಾನ‌ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದರು.‌ ಬಳಿಕ ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ‌ ಕಾರ್ಯದರ್ಶಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net