

ಗದಗ ಜಿಲ್ಲೆಯ 9 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ 47 ಲೋಡರ್ಸ್ ಮತ್ತು 11 ಕ್ಲೀನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ನ.28ರೊಳಗೆ ಸಲ್ಲಿಸಬೇಕು. ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ.
ಹುದ್ದೆಗಳ ವಿವರ
ಗದಗ-ಬೆಟಗೇರಿ ನಗರಸಭೆ- 1
ಗಜೇಂದ್ರಗಡ ಪುರಸಭೆ- 10
ಲಕ್ಷ್ಮೇಶ್ವರ ಪುರಸಭೆ- 9
ಮುಂಡರಗಿ ಪುರಸಭೆ- 10
ನಗರಗುಂದ ಪುರಸಭೆ- 10
ರೋಣ ಪುರಸಭೆ- 10
ಮುಳಗುಂದ ಪಟ್ಟಣ ಪಂಚಾಯಿತಿ- 4
ನರೇಗಲ್ಲ ಪಟ್ಟಣ ಪಂಚಾಯಿತಿ- 1
ಶಿರಹಟ್ಟಿ ಪಟ್ಟಣ ಪಂಚಾಯಿತಿ- 3
ಅರ್ಹತಾ ಮಾನದಂಡ: ಯಾವುದೇ ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು. ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್/ ಕ್ಲೀನರ್ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ/ ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನ ಕಾರ್ಯದಡಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಈ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ(11/02/2022) ಕನಿಷ್ಠ 2 ವರ್ಷ ಸೇವೆಯಲ್ಲಿ ಮುಂದುವರಿದಿರುವ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ಸ್ವಚ್ಛತಾ ಕಾರ್ಯಗಳಿಗೆ ಸಂಬಂಧಿಸಿದ ಹುದ್ದೆಗಳಾಗಿದ್ದು, ದೈಹಿಕ ಶ್ರಮದ ಅಗತ್ಯವಿದೆ.
ಅರ್ಜಿ ಶುಲ್ಕ: ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು (ಡಿಡಿಯನ್ನು ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿ ಕಾರ್ಯಾಲಯ, ಗದಗ ಇವರ ಹೆಸರಿಗೆ ತೆಗೆಯುವುದು) ಶುಲ್ಕ ಸಲ್ಲಿಸದಿರುವ ಅರ್ಜಿ ಹಾಗೂ ಅರ್ಜಿಯಲ್ಲಿ ನಮೂದಿಸಿದ ಪೂರ್ಣ ದಾಖಲೆ ಸಲ್ಲಿಸದೇ ಇರುವ ಅರ್ಜಿ ಪರಿಗಣಿಸಲಾಗುವುದಿಲ್ಲ. ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ- 1 ಮತ್ತು ಮಹಿಳಾ ಅಭ್ಯರ್ಥಿಗಳಿಗೆ 100 ರೂ., ಸಾಮಾನ್ಯ ವರ್ಗ 2ಎ, 2ಬಿ, 3ಎ, 3ಬಿ, ವರ್ಗದ ಅಭ್ಯರ್ಥಿಗಳಿಗೆ 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. ಇರುತ್ತದೆ.
ವಯೋಮಿತಿ: ಅರ್ಜಿ ಸಲ್ಲಿಸಲು ಕೊನೇ ದಿನಾಂಕದಂದು 18 ವರ್ಷ ಪೂರ್ಣಗೊಂಡಿದ್ದು, ಗರಿಷ್ಠ ವಯೋಮಿತಿ 55 ವರ್ಷ ಇರಬೇಕು.
ಅಭ್ಯರ್ಥಿಗಳಿಗೆ ಸೂಚನೆಗಳು
-ಅರ್ಜಿಗಳನ್ನು ಆಯಾ ನಗರಸಭೆ/ಪುರಸಭೆ/ ಪಟ್ಟಣ ಪಂಚಾಯಿತಿಗಳಿಗೆ ನೇರವಾಗಿ ಸಲ್ಲಿಸಿ ಸ್ವೀಕೃತಿ ಪಡೆಯತಕ್ಕದ್ದು, ಅಂಚೆ ಮೂಲಕ ಅಥವಾ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.
-ಕೊನೆಯ ದಿನಾಂಕದ ನಂತರ ಹಾಕಿದ ಮತ್ತು ಅಪೂರ್ಣವಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
-ಮೀಸಲಾತಿಯಡಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರದ ಬಗ್ಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು (ಅಧ್ಯಕ್ಷರು, ಜಾತಿ ಆದಾಯ ಪರಿಶೀಲನಾ ಸಮಿತಿ) ಸಿಂಧುತ್ವ ಪ್ರಮಾಣಪತ್ರ ಪಡೆದ ನಂತರ ನೇಮಕಾತಿ ಆದೇಶ ನೀಡಲಾಗುವುದು.
-ನೇಮಕಾತಿ ಬಗ್ಗೆ ಅಂತಿಮ ತೀರ್ಮಾನವನ್ನು ಗದಗದ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳು ತೆಗೆದುಕೊಳ್ಳುತ್ತಾರೆ.
ಅರ್ಜಿ ಸಲ್ಲಿಸಲು ಕೊನೇ ದಿನ: 28.11.2022
ಅಧಿಸೂಚನೆಗೆ: http://bit.ly/3WYDKYW
ಮಾಹಿತಿಗಾಗಿ: https://gadag.nic.in/