

17,000 ಕೋಟಿ ರೂ. ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಗ್ರೂಪ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅನಿಲ್ ಅಂಬಾನಿ ಅವರಿಗೆ ಜಾರಿ ನಿರ್ದೇಶನಾಲಯ (ED) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ಶುಕ್ರವಾರ ವರದಿಯಾಗಿದೆ.
ಆಗಸ್ಟ್ 5 ರಂದು ನವದೆಹಲಿಯಲ್ಲಿರುವ ಇಡಿ ಪ್ರಧಾನ ಕಚೇರಿಯಲ್ಲಿ ಅಧಿಕಾರಿಗಳ ಮುಂದೆ ಹಾಜರಾಗಲು ಸೂಚಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ, ಸಂಸ್ಥೆಯು(ಇಡಿ) ಹಣ ವರ್ಗಾವಣೆ ತನಿಖೆ ನಡೆಸುತ್ತಿದೆ. ತನಿಖೆಯ ಭಾಗವಾಗಿ, ಇಡಿ ಕಳೆದ ವಾರ ಮುಂಬೈನಲ್ಲಿ ಅಂಬಾನಿಯವರ ರಿಲಯನ್ಸ್ ಗ್ರೂಪ್‌ಗೆ ಸಂಬಂಧಿಸಿದ ಸುಮಾರು 35 ಸ್ಥಳಗಳನ್ನು ಶೋಧಿಸಿದೆ. ಈ ಶೋಧ ಸುಮಾರು 50 ಕಂಪನಿಗಳು ಮತ್ತು 25 ವ್ಯಕ್ತಿಗಳನ್ನು ಒಳಗೊಂಡಿತ್ತು.
ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣದಲ್ಲಿ ಇಡಿ ಒರಿಸ್ಸಾ ಮತ್ತು ಕೋಲ್ಕತ್ತಾದಲ್ಲಿ ಶೋಧ ನಡೆಸುತ್ತಿದೆ. ಈ ನಕಲಿ ಬ್ಯಾಂಕ್ ಗ್ಯಾರಂಟಿಯ ಆಧಾರದ ಮೇಲೆ ಅನಿಲ್ ಅಂಬಾನಿ ಅವರ ಸಂಸ್ಥೆಗೆ ಒಪ್ಪಂದವನ್ನು ನೀಡಲಾಗಿದೆ ಎಂದು ಇಡಿ ಆರೋಪಿಸಿದೆ.
ಅನಿಲ್ ಅಂಬಾನಿ ಅವರ ಸಂಸ್ಥೆಯು ಸಂಸ್ಥೆಗಳಿಗೆ ಕಮಿಷನ್‌ಗಾಗಿ ನಕಲಿ ಬಿಲ್‌ಗಳನ್ನು ಸಹ ಸೃಷ್ಟಿಸಿದೆ ಎಂದು ಜಾರಿ ನಿರ್ದೇಶನಾಲಯದ ಆರೋಪವಾಗಿದೆ.(ಏಜೆನ್ಸೀಸ್)