ನಿವೇಶನಕ್ಕೆ ಒತ್ತಾಯಿಸಿ ಡಿಸಿಗೆ ಮನವಿ....!!!!

H2
Published on

ಹಾಸನ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕಕ್ಕೆ ನಗರದಲ್ಲಿ ಸಿಎ ನಿವೇಶನ ಮಂಜೂರು ಮಾಡಿಕೊಡಬೇಕೆಂದು ಆಗ್ರಹಿಸಿ ಮಂಗಳವಾರ ಮಹಾಸಭಾ ಪದಾಧಿಕಾರಿಗಳು ಜಿಲ್ಲಾಧಿಕಾರಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.ಅಖಿಲ ಭಾರತ ವೀರಶೈವ ಮಹಾಸಭಾ ಲಿಂಗಾಯತ ಸಮುದಾಯದ ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಘಟಕಗಳನ್ನು ಹೊಂದಿದೆ. ಹಾಸನದಲ್ಲಿಯೂ ಕಾರ್ಯನಿರ್ವಹಿಸುತ್ತಿರುವ ಘಟಕ ದಶಕಗಳಿಂದ ಸಾಕಷ್ಟು ಸಮಾಜಮುಖಿ ಕೆಲಸ ಮಾಡಿಕೊಂಡು ಬಂದಿದೆ ಎಂದರು.ಜಿಲ್ಲೆಯಲ್ಲಿ ಮೂರುವರೆ ಲಕ್ಷ ಹಾಗೂ ನಗರದಲ್ಲಿ 22 ಸಾವಿರ ವೀರಶೈವ ಲಿಂಗಾಯತರು ವಾಸವಿದ್ದಾರೆ. ಆದರೆ ಸಮಾಜದ ಯಾವುದೇ ಸಭೆ ಸಮಾರಂಭ ನಡೆಸಲು ಸ್ವಂತ ಜಾಗವಿಲ್ಲ. ಧಾರ್ಮಿಕ ಕಾರ್ಯಕ್ರಮಗಳಿಗೂ ಬೇರೆ ಕಟ್ಟಡಗಳ ಮೊರೆ ಹೋಗಬೇಕಾದ ಪರಿಸ್ಥಿತಿ ಇದೆ ಎಂದರು.ಬಸವಾದಿ ಶರಣರ ತತ್ವ ಪ್ರಚಾರದ ಹೊಣೆಯ ಜತೆಗೆ ಹಾಸನದಲ್ಲಿ ಬಸವ ಭವನ ನಿರ್ಮಿಸಲು ಮಹಾಸಭಾ ಆಲೋಚಿಸಿದೆ. ಆದ್ದರಿಂದ ನಗರದ ಪ್ರಶಸ್ತಿ ಸ್ಥಳದಲ್ಲಿ ನಿವೇಶನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net