ಪಟಾಕಿ ಅಂಗಡಿಗೆ ಸ್ಥಳ ಪರಿಶೀಲನೆ

fire work shop
ಬಾಳೆಹೊನ್ನೂರಿನ ಕಲಾರಂಗ ಕ್ರೀಡಾಂಗಣದಲ್ಲಿ ಪಟಾಕಿ ಅಂಗಡಿ ತೆರೆಯುವ ಸ್ಥಳವನ್ನು ಎನ್.ಆರ್.ಪುರ ತಹಸೀಲ್ದಾರ್ ತನುಜಾ ಟಿ. ಸವದತ್ತಿ ವೀಕ್ಷಿಸಿದರು. ರಾಜಪ್ಪ, ಕಾಶಪ್ಪ, ಸಮೀಕ್ಷಾ ಇದ್ದರು.
Published on

ಬಾಳೆಹೊನ್ನೂರು: ಪಟ್ಟಣದ ಕಲಾರಂಗ ಕ್ರೀಡಾಂಗಣದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಆರಂಭಗೊಳ್ಳಲಿರುವ ಪಟಾಕಿ ಅಂಗಡಿಗಳ ಸ್ಥಳ ಪರಿಶೀಲನೆ ಗುರುವಾರ ನಡೆಸಲಾಯಿತು. ಎನ್.ಆರ್.ಪುರ ತಹಸೀಲ್ದಾರ್ ತನುಜಾ ಟಿ. ಸವದತ್ತಿ ಸ್ಥಳ ಪರಿಶೀಲನೆ ನಡೆಸಿ ಸರ್ಕಾರ, ಜಿಲ್ಲಾಡಳಿತ ಸೂಚಿಸಿರುವ ಮಾರ್ಗಸೂಚಿಯಂತೆ ಪಟಾಕಿ ಅಂಗಡಿಗಳನ್ನು ತೆರೆಯಬೇಕು. ಸೂಕ್ತ ಸುರಕ್ಷತಾ ಕ್ರಮ ಕೈಗೊಂಡು ಅಂಗಡಿಗಳನ್ನು ನಿರ್ಮಾಣ ಮಾಡಬೇಕು ಎಂದರು. ಪಿಎಸ್‌ಐ ವಿ.ಟಿ.ದಿಲೀಪ್‌ಕುಮಾರ್, ಮೆಸ್ಕಾಂ ಜೆಇ ರಾಜಪ್ಪ, ಬಿ.ಕಣಬೂರು ಗ್ರಾಪಂ ಪಿಡಿಒ ಕಾಶಪ್ಪ, ಗ್ರಾಮ ಲೆಕ್ಕಾಧಿಕಾರಿ ಸಮೀಕ್ಷಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net