ಕೇಂದ್ರ ಸರ್ಕಾರದ ಲಾಕ್​ಡೌನ್​ ಆದೇಶ ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೂಚನೆ

vijaya baskar 30 mar 20
Published on

ಬೆಂಗಳೂರು: ಕರೊನಾ ವೈರಸ್​ ಸೋಂಕು ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್​ ಸೂಚನೆ ನೀಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡುವುದು ಕಡ್ಡಾಯ. ವಲಸಿಗರನ್ನು ಗಡಿಯಲ್ಲೇ ತಡೆದು ಕ್ವಾರಂಟೈನ್ ಮತ್ತು ಊಟೋಪಾಚಾರದ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಮುಖ್ಯವಾಗಿ ಕರೊನಾ ಸೋಂಕಿತರ ಜತೆಗೆ ಮೊದಲ ಮತ್ತು 2ನೇ ಸಂಪರ್ಕದಲ್ಲಿ ಇರುವವರ ಮೇಲೆ ನಿಗಾವಹಿಸಬೇಕು. ಜನರು ಮನೆಯಲ್ಲೇ ಇರುವಂತೆ ನೋಡಿಕೊಳ್ಳಬೇಕು. ದೈನಂದಿನ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಬೇಕು. ದಿನಸಿ ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಅಗತ್ಯ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡು ಬಂದರೆ ಇಲ್ಲವೇ ದೂರುಗಳು ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಡಿಸಿ ಹಾಗೂ ಎಸ್ಪಿಗಳಿಗೆ ಮುಖ್ಯ ಕಾರ್ಯದರ್ಶಿ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net