

ಕಲಬುರಗಿ: ಕ್ವಾರಂಟೈನ್ ಕೇಂದ್ರದಲ್ಲಿ ಇದ್ದವರನ್ನು ಕರೊನಾ ಪರೀಕ್ಷೆ ವರದಿ ಬರುವ ಮುನ್ನವೇ ಮನೆಗೆ ಕಳುಹಿಸುತ್ತಿರುವ ಕ್ರಮವನ್ನು ಸಮರ್ಥಿಸಿಕೊಂಡ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್, ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಕುರಿತು ಮಾತನಾಡಿದ್ದಾರೆ.
ನಗರದ ಜಿಮ್ಸ್ ವೈದ್ಯಕೀಯ ಕಾಲೇಜಿಗೆ ಭಾನುವಾರ ಬೆಳಗ್ಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕ್ವಾರಂಟೈನ್ ಕೇಂದ್ರಗಳಲ್ಲಿ ಅವ್ಯವಸ್ಥೆ ಇಲ್ಲ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆಯೇ ವ್ಯವಸ್ಥೆ ಮಾಡಲಾಗಿದೆ ಎಂದರು. ಇದನ್ನೂ ಓದಿರಿ ಕೆಪಿಸಿಸಿ ಕಟ್ಟಡದಲ್ಲಿ ಬೆಳ್ಳಂಬೆಳಗ್ಗೆ ಹೋಮ-ಹವನ, ಇದೋ ಡಿಕೆಶಿ ಸಂಕಲ್ಪ…
ಇದಕ್ಕೂ ಮುನ್ನ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗಾಣಗಾಪುರದ ದತ್ತ ಮಂದಿರಕ್ಕೆ ಸಚಿವರು ಭೇಟಿ ಮಹಾರಾಜರ ದರ್ಶನ ಪಡೆದರು. ಕರೊನಾ ಮುಕ್ತಗೊಳಿಸುವಂತೆ ಪ್ರಾರ್ಥಿಸಿದರು. ಶಾಸಕ ಬಸವರಾಜ ಮತ್ತಿಮೂಡ, ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ್, ಆಡಳಿತ ಮಂಡಳಿ ನಿರ್ದೇಶಕ ಪ್ರಲ್ಹಾದ ಭಟ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.