

ಬೆಂಗಳೂರು: ಲಾಕ್‌ಡೌನ್ ಸಡಿಲಗೊಂಡ ಬಳಿಕ ಕರೊನಾ ಸೋಂಕಿನ ಅಟ್ಟಹಾಸ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕರೊನಾ ಸಾವು-ನೋವಿನ ಪ್ರಕರಣಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಬೇಕು ಎಂಬ ಕೂಗು ಕೇಳಿಬರುತ್ತಿದೆ. ಈ ನಡುವೆ ಮತ್ತೊಮ್ಮೆ ಲಾಕ್‌ಡೌನ್ ಜಾರಿ ಅಗತ್ಯವಿದೆಯೇ? ಎಂಬುದನ್ನು ಕುರಿತು ಹಿರಿಯ ಅಧಿಕಾರಿಗಳ ಜತೆ ಸಿಎಂ ಬಿ.ಎಸ್ ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ.
ಗುರುವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸದ್ಯದ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಯಲಿದೆ. ಕರೊನಾ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿರಿ ಎಚ್ಚರ! ಆಸ್ಪತ್ರೆಯಿಂದ ಕರೊನಾ ಸೋಂಕಿತ ಎಸ್ಕೇಪ್, ನಿಮ್ಮ ಬಳಿಯೂ ಆತ ಬರಬಹುದು…
ಲಾಕ್‌ಡೌನ್ ವಿಚಾರವಾಗಿ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಚರ್ಚಿಸುತ್ತಿದ್ದಾರೆ. ಮತ್ತೊಮ್ಮೆ ಲಾಕ್‌ಡೌನ್ ಮಾಡಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ಸಿಎಂ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಡೀ ಬೆಂಗಳೂರನ್ನೇ 20 ದಿನ ಸಂಪೂರ್ಣವಾಗಿ ಲಾಕ್‌ಡೌನ್ ಮಾಡುವಂತೆ ಬಿಎಸ್ವೈ ಅವರನ್ನು ನಿನ್ನೆ(ಮಂಗಳವಾರ) ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದರು. ಅಲ್ಲದೆ ದೇಶಾದ್ಯಂತ ಮತ್ತೊಮ್ಮೆ ಲಾಕ್‌ಡೌನ್ ಮಾಡುವಂತೆ ಟ್ವೀಟ್ ಮೂಲಕ ಪ್ರಧಾನಿ ಅವರಿಗೂ ಮನವಿ ಮಾಡಿದ್ದರು.
ಈಗಾಗಲೇ ಬೆಂಗಳೂರಿನಲ್ಲಿ ಕೆಆರ್ ಮಾರುಕಟ್ಟೆ ಸುತ್ತಮುತ್ತಲ ಪ್ರದೇಶ ಸೇರಿದಂತೆ ಕೆಲವು ಏರಿಯಾಗಳನ್ನು ಸೀಲ್ಡೌನ್ ಮಾಡಲಾಗಿದೆ.