ಮೇ 15ರವರೆಗೆ ಲಾಕ್​ಡೌನ್​ ಘೋಷಿಸಿದ ರಾಜ್ಯ ಸರ್ಕಾರ! ಅಲ್ಲಿಯವರೆಗೆ ಎಲ್ಲ ಬಂದ್​

lockdown
Published on

ಪಟನಾ: ದೇಶದಲ್ಲಿ ಕರೊನಾ ಸೋಂಕಿನ ತೀವ್ರತೆ ಹೆಚ್ಚಲಾರಂಭಿಸಿದ್ದು, ರಾಜ್ಯಗಳು ರಾಜ್ಯವ್ಯಾಪಿ ಲಾಕ್​ಡೌನ್​ ಹೋಗಲಾರಂಭಿಸಿವೆ. ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಈಗಾಗಲೇ ಲಾಕ್​ಡೌನ್​ ಜಾರಿಯಲ್ಲಿದೆ. ಇದೀಗ ಬಿಹಾರದಲ್ಲಿಯೂ ಲಾಕ್​ಡೌನ್​ ಮಾಡುವುದಾಗಿ ಸರ್ಕಾರ ಘೋಷಿಸಿದೆ.

ಸಂಪುಟ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಅವರೆಲ್ಲರ ಸಲಹೆಯ ಆಧಾರದ ಮೇರೆಗೆ ರಾಜ್ಯದಲ್ಲಿ ಮೇ 15ರವರೆಗೆ ಲಾಕ್​ಡೌನ್​ ಜಾರಿಯಲ್ಲಿರಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರದಂದು ಟ್ವಿಟ್ಟರ್​ನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಮಾರ್ಗಸೂಚಿ ತಯಾರಿಸಲಾಗುತ್ತಿದ್ದು, ಶೀಘ್ರವೇ ಅದನ್ನು ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ.

ಬಿಹಾರದಲ್ಲಿ ಸೋಮವಾರ 11,407 ಜನರಲ್ಲಿ ಕರೊನಾ ದೃಢವಾಗಿದೆ. ಈ ಮೂಲಕ ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 5.09 ಲಕ್ಷಕ್ಕೆ ಏರಿಕೆಯಾಗಿದೆ. ರಾಜಧಾನಿ ಪಟನಾದಲ್ಲಿಯೇ ಹೆಚ್ಚಿನ ಸಂಖ್ಯೆಯ ಸೋಂಕಿತರು ಪತ್ತೆಯಾಗುತ್ತಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net